ಬಂಟ್ವಾಳ

ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆ

ಮಾಜಿ ಮೇಯರ್‌ ಕವಿತಾ ಸನಿಲ್ ಶನಿವಾರ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಜಾಹೀರಾತು

ಬಂಟ್ವಾಳದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಉಪಸ್ಥಿತಿಯಲ್ಲಿ ಕವಿತಾ ಸನಿಲ್ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಮಂಗಳೂರು ಮನಪಾ ಮೇಯರ್ ಆಗಿ ಜನಪ್ರಿಯತೆ ಗಳಿಸಿದ್ದ ಕವಿತಾ ಸನಿಲ್ ಅವರು, ಅಂತರಾಷ್ಟ್ರೀಯ ಮಟ್ಟದ ಖ್ಯಾತ ಕರಾಟೆ ಪಟುವಾಗಿದ್ದಾರೆ.  ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ, ತಾನು ಸಿದ್ಧಾಂತವನ್ನು ಒಪ್ಪಿಕೊಂಡು ಇಂದು ಬಿಜೆಪಿ ಸೇರ್ಪಡೆಗೊಂಡಿದ್ದೇನೆ. ಇಂದು ನಾನು ಬಿಜೆಪಿ ಸೇರ್ಪಡೆ ಆಗುತ್ತೇನೆಂದು ತಾನು ಯಾರಲ್ಲೂ ಹೇಳಿಲ್ಲ‌. ಆದರೆ ನನ್ನ ರಾಜಕೀಯ ಗುರು, ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯವರಿಗೆ ತಿಳಿಸಿ ಅವರ ಆಶೀರ್ವಾದ ಪಡೆದು ಬಂದಿದ್ದೇನೆ. ಅವರು ತನ್ನ ಭವಿಷ್ಯ ಉಜ್ವಲವಾಗಲಿ ಎಂದು ಆಶೀರ್ವದಿಸಿ ಹರಸಿದ್ದಾರೆ ಎಂದು ಕವಿತಾ ಸನಿಲ್ ಹೇಳಿದರು.ಇವತ್ತು ನಮ್ಮ ಧರ್ಮ ಉಳಿದ ಮೇಲೆ ಜಾತಿ ಉಳೀತದೆ, ಹಿಂದುವಾಗಿ, ಧರ್ಮ ಉಳೀಬೇಕು ಎಂಬ ದೃಷ್ಟಿಯಿಂದ ಬಿಜೆಪಿ ಸೇರಿದ್ದೇನೆ ಎಂದು ಹೇಳಿದ ಕವಿತಾ ಸನಿಲ್, ಇತ್ತೀಚಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಆಗುತ್ತಿರುವ ಬದಲಾವಣೆಗಳನ್ನು ಗಮನಿಸಿ ಸೇರಿದೆ ಎಂದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ