ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಪ್ರತಿಬಂಧಕಾಜ್ಞೆ ಜಾರಿ, ಚುನಾವಣೆ ಸಂದರ್ಭ ನೀವು ಪಾಲಿಸಬೇಕಾದ ನಿಯಮಗಳು ಇವು

ಲೋಕಸಭಾ ಚುನಾವಣಾ ಹಿನ್ನಲೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಹಾಗೂ ಉಡುಪಿ ಕ್ಷೇತ್ರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಮುಕ್ತ ಮತ್ತು ನ್ಯಾಯೋಜಿತ ಮತದಾನಕ್ಕೆ ಅವಕಾಶ ಕಲ್ಪಿಸುವ ಸಲುವಾಗಿ ಏ.24 ಬುಧವಾರ ಸಂಜೆ 6 ಗಂಟೆಯಿಂದ ಏ.26 ಶುಕ್ರವಾರ ರಾತ್ರಿ 10 ಗಂಟೆಯವರೆಗೆ ಪ್ರತಿಬಂಧಕಾಜ್ಞೆಯನ್ನು ಜಾರಿಗೊಳಿಸಲಾಗಿದೆ.
5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿಸಿದೆ. ಚುನಾವಣಾ ಅಭ್ಯರ್ಥಿ / ಬೆಂಬಲಿಗರು ಸೇರಿ 5 ಜನಕ್ಕಿಂತ ಹೆಚ್ಚಿನ ಸಂಖ್ಯೆಯ ಜನರು ಸೇರುವಂತಿಲ್ಲ. ಶಸ್ತ್ರ, ಬಡಿಗೆ, ಬರ್ಚಿ, ಖಡ್ಗ, ಗದೆ, ಬಂದೂಕು, ಚೂರಿ, ಲಾಠಿ, ದೊಣ್ಣೆ, ಚಾಕು, ಅಥವಾ ದೇಹಕ್ಕೆ ಅಪಾಯವನ್ನು ಉಂಟು ಮಾಡಬಹುದಾದ ಯಾವುದೇ ಮಾರಕಾಸ್ತ್ರವನ್ನು ತೆಗೆದುಕೊಂಡು ಹೋಗುವುದನ್ನು ಮತ್ತು ಅವುಗಳೊಂದಿಗೆ ತಿರುಗಾಡುವುದನ್ನು ಪ್ರತಿ ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಜೆರಾಕ್ಸ್ ಅಂಗಡಿ, ಬುಕ್ಸ್ ಸ್ಟಾಲ್, ಸೈಬರ್ ಕೆಫೆಗಳನ್ನು ನಿಬರ್ಂಧಿಸಿದೆ. ಮತದಾನದ ದಿನದಂದು ಮತಗಟ್ಟೆಗಳ 200 ಮೀಟರ್ ಒಳಗೆ ಚುನಾವಣೆ ಪ್ರಚಾರ ನಿಷೇಧಿಸಿದೆ.
ಕಲ್ಲುಗಳನ್ನು, ಕ್ಷಾರ ಪದಾರ್ಥ ಇಲ್ಲವೇ ಸ್ಪೋಟಕ ವಸ್ತುಗಳು, ಯಾವುದೇ ದಾಹಕ ವಸ್ತುಗಳು ಇತ್ಯಾದಿಗಳನ್ನು ಸದರಿ ಸ್ಥಳಕ್ಕೆ ತೆಗೆದುಕೊಂಡು ಹೋಗುವುದನ್ನು ಹಾಗೂ ಶೇಖರಿಸುವುದನ್ನು ನಿಷೇಧಿಸಲಾಗಿದೆ. ಕಲ್ಲುಗಳನ್ನು ಮತ್ತು ಎಸೆಯುವಂತಹ ವಸ್ತುಗಳನ್ನು ಎಸೆಯುವ ಅಥವಾ ಬಿಡುವ ಸಾಧನಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ. ಮನುಷ್ಯ ಶವಗಳ ಅಥವಾ ಅವುಗಳ ಆಕೃತಿ ಅಥವಾ ಪ್ರತಿಮೆಗಳ ಪ್ರದರ್ಶನ ಅಥವಾ ದಹನ ಮಾಡುವುದನ್ನು ಪ್ರತಿಬಂಧಿಸಲಾಗಿದೆ. ಈ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಬಳಸುವಂತಿಲ್ಲ. ಸದರಿ ಸ್ಥಳದಲ್ಲಿ ಬಹಿರಂಗವಾಗಿ ಘೋಷಣೆ ಮಾಡುವುದು, ಪದ ಹಾಡುವುದು, ವಾದ್ಯ ಬಾರಿಸುವುದು, ವ್ಯಾಖ್ಯಾನ ಕೊಡುವುದು, ಸನ್ನೆ ಅಥವಾ ನಕಲಿ ಪ್ರದರ್ಶನವನ್ನು ಹಾಗೂ ಸಾರ್ವಜನಿಕ ಸಬ್ಯತೆ ಅಥವಾ ನೀತಿಯನ್ನು ಆಕ್ರಮಿಸಬಹುದಾದ ಕೃತ್ಯಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ.
ಸಾರ್ವಜನಿಕವಾಗಿ ಯಾವುದೇ ವ್ಯಕ್ತಿ ಪ್ರಚೋದನಾತ್ಮಕ ಹಾಗೂ ಉದ್ರೇಕಕಾರಿ ಹಾಡುಗಳು, ಕೂಗಾಟ ಮಾಡುವುದನ್ನು ಹಾಗೂ ವ್ಯಕ್ತಿಗಳ ತೇಜೋವದೇ ಮಾಡುವಂತಹ ಚಿತ್ರಗಳು, ಚಿನ್ಹೆಗಳು, ಪ್ರತಿಕೃತಿಗಳು ಮುಂತಾದವುಗಳನ್ನು ಪ್ರದರ್ಶಿಸುವುದಾಗಲಿ ಅಥವಾ ಸಾರ್ವಜನಿಕ ಗಾಂಭೀರ್ಯ ಹಾಗೂ ನೈತಿಕತೆಗೆ ಭಂಗ ತರುವಂತಹ ಅಥವಾ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ತರುವಂತಹ ಯಾವುದೇ ಕೃತ್ಯಗಳಲ್ಲಿ ತೊಡಗುವುದನ್ನು ನಿಷೇಧಿಸಲಾಗಿದೆ. ಯಾವುದೇ ವ್ಯಕ್ತಿ ಬಹಿರಂಗವಾಗಿ ಮೇಲೆ ವಿವರಿಸಿದ ಮಾರಕಾಸ್ತ್ರಗಳು, ಸ್ಪೋಟಕ ವಸ್ತುಗಳು, ವಿನಾಶಕಾರಿ ವಸ್ತುಗಳು ಹಾಗೂ ಇತರೆ ಆಕ್ಷೇಪಾರ್ಥ ವಸ್ತುಗಳನ್ನು ಹೊಂದಿದ್ದು ಕಂಡುಬಂದ ಕೂಡಲೇ ಅವುಗಳನ್ನು ವಶಪಡಿಸಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಅಧಿಕಾರಿ ಇರುತ್ತದೆ. ಅಂತಹ ಮಾರಕಾಸ್ತ್ರಗಳನ್ನು ಸರಕಾರಕ್ಕೆ ಮುಟ್ಟುಗೋಲು ಮಾಡಿಕೊಳ್ಳಲಾಗುವುದು, ಅಲ್ಲದೆ ಸಂಬಂಧಿಸಿದ ವ್ಯಕ್ತಿಗಳ ಮೇಲೆ ಕಾನೂನು ರಿತ್ಯ ಕ್ರಮ ಜರುಗಿಸಲಾಗುವುದು. ಶವ ಸಂಸ್ಕಾರಕ್ಕೆ ಅಥವಾ ಮದುವೆ ಮತ್ತು ಧಾರ್ಮಿಕ ಮೆರವಣಿಗೆಗಳಿಗೆ ಹಾಗೂ ಕೋವಿಡ್ -19 ಕಾರ್ಯಗಳಿಗೆ ಈ ಆಜ್ಞೆ ಅನ್ವಯಿಸುವುದಿಲ್ಲ.
ಮದುವೆ ಮತ್ತು ಇತರೆ ಧಾರ್ಮಿಕ ಮೆರವಣಿಗೆಗಳು ಯಾವತ್ತೂ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಿಯಮಗಳನ್ನು ಪಾಲಿಸುವುದು. ಮೇಲ್ಕಂಡ ಅವಧಿಯಲ್ಲಿ ಯಾವುದೇ ಸಾರ್ವಜನಿಕ ಸಭೆಗಳನ್ನು ಕೈಗೊಳ್ಳುವಂತಿಲ್ಲ. ಮೇಲ್ಕಂಡ ಅವಧಿಯಲ್ಲಿ ಕ್ಷೇತ್ರದ ಮತದಾರರಲ್ಲದ ರಾಜಕೀಯ ಪಕ್ಷಗಳ ಮುಖಂಡರುಗಳು ಕಡ್ಡಾಯವಾಗಿ ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಹೋಗತಕ್ಕದ್ದು. ಮತದಾನದ ದಿನದಿಂದ ಮತಗಟ್ಟೆಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನು, ಕೋಡ್ರ್ಲೆಸ್ ಫೋನು ಅಥವಾ ಇನ್ನಿತರ ಎಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ನಿಷೇಧಿಸಲಾಗಿದೆ ( ಚುನಾವಣಾ ಕಾರ್ಯದಲ್ಲಿ ನಿರತರಾಗಿರುವ ಅಧಿಕಾರಿಗಳು ಸಿಬ್ಬಂದಿಗಳು ಹೊರತುಪಡಿಸಿ)
ಮತದಾನ ದಿನದಂದು ಮತಗಟ್ಟೆಗಳ ಸುತ್ತ 200 ಮೀಟರ್ ಪರಿಮಿತಿಯಲ್ಲಿ ಪ್ರಚಾರಕ್ಕೆ ಸಂಬಂಧಿಸಿದ ಪೋಸ್ಟರ್, ಬ್ಯಾನರ್ ಅಥವಾ ಇನ್ನೂ ಬಳಸುವಂತಿಲ್ಲ. ಕಲ್ಯಾಣ ಮಂಟಪಗಳು / ಸಮುದಾಯ ಭವನಗಳು / ಹೋಟೆಲ್‍ಗಳು ಮತ್ತು ಅತಿಥಿ ಗ್ರಹಗಳಲ್ಲಿ ವಾಸ್ತವ್ಯ ಮಾಡಿರುವವರ ಪಟ್ಟಿಗಳ ಪರಿಶೀಲನೆ ಮಾಡಿ ಕ್ಷೇತ್ರದ ಮತದಾರರೆಲ್ಲದ ರಾಜಕೀಯ ಪಕ್ಷಗಳ ವ್ಯಕ್ತಿಗಳನ್ನು ಕ್ಷೇತ್ರದ ವ್ಯಾಪ್ತಿಯಿಂದ ಹೊರಗೆ ಕಳುಹಿಸಲು ಕ್ರಮ ವಹಿಸಲಾಗುತ್ತದೆ ಎಂದು ಜಿಲ್ಲಾ ದಂಡಾಧಿಕಾರಿಗಳೂ ಹಾಗೂ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ: ಪ್ರತಿಬಂಧಕಾಜ್ಞೆ ಜಾರಿ, ಚುನಾವಣೆ ಸಂದರ್ಭ ನೀವು ಪಾಲಿಸಬೇಕಾದ ನಿಯಮಗಳು ಇವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*