ಪ್ರಮುಖ ಸುದ್ದಿಗಳು

ಕ್ಯಾಪ್ಟನ್ ಬ್ರಿಜೇಶ್ ಚೌಟ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ದೊಡ್ಡ ಕನಸನ್ನು ಇಟ್ಟುಕೊಂಡ ವ್ಯಕ್ತಿ, ದಾಖಲೆಯ ಅಂತರದಿಂದ ಗೆಲ್ಲಿಸಿ ಮೋದಿ ಕೈಬಲಪಡಿಸಿ ; ಪುತ್ತೂರಿನ ಬೃಹತ್ ರೋಡ್ ಶೋದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾ ಮಲೈ

ಜಾಹೀರಾತು

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ದಾಖಲೆಯ ಅಂತರದಿಂದ ಗೆಲ್ಲಿಸಬೇಕು. ಭಾರತೀಯ ಸೇನೆಯ ಗೋರ್ಖಾ ರೆಜಿಮೆಂಟಿನಲ್ಲಿ ದೇಶ ಸೇವೆ ಮಾಡಿ ಬಂದವರು. ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಯ ಬಗ್ಗೆ ದೊಡ್ಡ ಕನಸನ್ನು ಇಟ್ಟುಕೊಂಡ ವ್ಯಕ್ತಿ ನಮಗೆ ಅಭ್ಯರ್ಥಿಯಾಗಿ ಸಿಕ್ಕಿದ್ದಾರೆ ಎಂದು ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ಹೇಳಿದ್ದಾರೆ.

ಪುತ್ತೂರಿನಲ್ಲಿ ಬೃಹತ್ ರೋಡ್ ಶೋ ನಡೆಸಿದ ವೇಳೆ ಕಾರ್ಯಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು.

ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾತನಾಡಿ,  ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಲು ನಮ್ಮ ಕ್ಷೇತ್ರದಲ್ಲಿ ಅತಿ ಹೆಚ್ಚು ಓಟಿಂಗ್ ಆಗುವಂತೆ ಸಂಕಲ್ಪ ಮಾಡೋಣ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ, ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಫೈರ್ ಬ್ರಾಂಡ್ ಮುಖಂಡ ಅರುಣ್ ಪುತ್ತಿಲ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್, ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರೋಡ್ ಶೋ ವಾಹನಲ್ಲಿ ಇದ್ದರು. ಇದಕ್ಕೂ ಮುನ್ನ ಕಡಬ ಪೇಟೆಯಲ್ಲಿ ರೋಡ್ ಶೋ ನಡೆಯಿತು.ಪುತ್ತೂರಿನಿಂದ ಮಂಗಳೂರಿಗೆ ಹಿಂತಿರುಗುವ ಸಂದರ್ಭದಲ್ಲಿ ಫರಂಗಿಪೇಟೆಯಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts