ಬಾವಿಗೆ ರಿಂಗ್ ಹಾಕುವ ವೇಳೆ ಆಮ್ಲಜನಕದ ಕೊರತೆಯುಂಟಾಗಿ ಕಾರ್ಮಿಕರಿಬ್ಬರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ ಮತ್ತು ಮಲಾರ್ ನಿವಾಸಿ ಆಲಿ ಸಾವನ್ನಪ್ಪಿದವರು.
ಅಳಕೆ ಸಮೀಪ ಪಡಿಬಾಗಿಲಿನಲ್ಲಿ ಸುಮಾರು30 ಫೀಟ್ ಆಳದ ಬಾವಿಗೆ ರಿಂಗ್ ಹಾಕಿ ನಂತರ ಕ್ಲೀನಿಂಗ್ ಮಾಡಲೆಂದು ಓರ್ವ ಕಾರ್ಮಿಕ ಬಾವಿಗಿಳಿದಿದ್ದರು. ಕೆಳಗಿಳಿದವರು ಮೇಲೆರಲಾರದೆ ಒದ್ದಾಟ ನಡೆಸುತ್ತಿರುವುದನ್ನು ಕಂಡ ಮತ್ತೊಬ್ಬರು ಅವರ ಸಹಾಯಕ್ಕೆಂದು ಕೆಳಗಿಳಿದಿದ್ದರು. ಕೆಳಗಿಳಿದ ಇಬ್ಬರಿಗೂ ಆಮ್ಲಜನಕದ ಕೊರತೆ ಉಂಟಾಯಿತು ಎನ್ನಲಾಗಿದೆ. ಈ ಸಂದರ್ಭ ಇಬ್ಬರೂ ಹೊರಬಾರಲಾಗದೆ ಸಾವನ್ನಪ್ಪಿದ್ದಾರೆ.
Be the first to comment on "ಬಾವಿಯೊಳಗಿಳಿದ ಕಾರ್ಮಿಕರಿಬ್ಬರು ಮೃತ್ಯುವಶ"