ಲೋಕಸಭಾ ಸಾರ್ವತ್ರಿಕ ಚುನಾವಣೆ 2024ಕ್ಕೆ ಸಂಬಂಧಿಸಿದಂತೆ ಚುನಾವಣಾ ಮತದಾನ ಹಾಗೂ ಮತ ಎಣಿಕಾ ಕಾರ್ಯ ನಡೆಯುವ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಏಪ್ರಿಲ್ 24ರ ಸಂಜೆ 6 ಗಂಟೆಯಿಂದ ಏಪ್ರಿಲ್ 26ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಹಾಗೂ ಮತ ಎಣಿಕೆಯ ದಿನ ಜೂನ್ 3ರಂದು ಮಧ್ಯರಾತ್ರಿ 12 ಗಂಟೆಯಿಂದ ಜೂನ್ 4ರಂದು ಮಧ್ಯರಾತ್ರಿ 12 ಗಂಟೆಯವರೆಗಿನ ಅವಧಿಯನ್ನು ಮಧ್ಯಮುಕ್ತ ದಿನಗಳು ಎಂದು ಘೋಷಿಸಲಾಗಿದೆ.
ಆ ದಿನಗಳಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿಗಳು, ಮದ್ಯ ಮಾರಾಟ ಡಿಪೆÇೀಗಳು, ಮದ್ಯ ತಯಾರಿಕಾ ಡಿಸ್ಟಿಲರಿಗಳು, ಸ್ಟಾರ್ ಹೋಟೆಲ್ ಗಳು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚುವಂತೆ ಜಿಲ್ಲಾ ದಂಡಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಆದೇಶ ಹೊರಡಿಸಿದ್ದಾರೆ.
Be the first to comment on "ಚುನಾವಣೆ ಹಿನ್ನೆಲೆ: ಈ ದಿನಗಳಲ್ಲಿ ಮದ್ಯ ನಿಷೇಧ"