ಬಂಟ್ವಾಳ

ಬಂಟ್ವಾಳ ಕ್ಷೇತ್ರದಲ್ಲೂ ಕಾಂಗ್ರೆಸ್ ಲೀಡ್, ಪದ್ಮರಾಜ್ ಕಡೆ ಮತದಾರರ ಒಲವು: ಬಂಟ್ವಾಳದಲ್ಲಿ ರಮಾನಾಥ ರೈ

ಜಾಹೀರಾತು

ಗ್ಯಾರಂಟಿ ಬೋಗಸ್, ಅದನ್ನು ನಂಬಬೇಡಿ ಎಂದು ಇಲ್ಲಿನ ಶಾಸಕರು ಹೇಳಿದ್ದರು, ಆದರೆ ಈಗ ಇದೇ ಕ್ಷೇತ್ರದ ಮಹಿಳೆಯರು ಗ್ಯಾರಂಟಿಯ ಫಲಾನುಭವಿಗಳಾಗಿದ್ದು, ಕಾರ್ಯಕರ್ತರು ಮತಯಾಚನೆಗೆ ಹೋದಾಗ ಉತ್ತಮ ಪ್ರತಿಕ್ರಿಯೆ ಲಭಿಸುತ್ತಿದೆ. ಈ ಬಾರಿ ಪದ್ಮರಾಜ್ ಅವರು ಕಾಂಗ್ರೆಸ್ ನಿಂದ ಗೆಲ್ಲುವುದು ನಿಶ್ಚಿತವಾಗಿದ್ದು, ಬಂಟ್ವಾಳ ಕ್ಷೇತ್ರದಲ್ಲಿ ಕಳೆದ ಬಾರಿ ಅಲ್ಪ ಅಂತರದಲ್ಲಿ ಆಗಿರುವ ಹಿನ್ನಡೆ ತೊಡೆದು, ಈ ಬಾರಿ ಕಾಂಗ್ರೆಸ್ ಲೀಡ್ ಗಳಿಸುತ್ತದೆ ಎಂಬ ವಿಶ್ವಾಸವನ್ನು ದಕ್ಷಿಣ ಕನ್ನಡ ಜಿಲ್ಲೆ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರೂ ಆಗಿರುವ ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಾಂಗ್ರೆಸ್ ನ ಸಂಸದರುಗಳಿದ್ದಾಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಾಗಿದ್ದು ಹೊರತುಪಡಿಸಿದರೆ, ಬಿಜೆಪಿಯವರು ಕೇವಲ ಭಾವನಾತ್ಮಕ ವಿಚಾರಗಳಿಂದ ಚುನಾವಣೆಯಲ್ಲಿ ಜಯಗಳಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಈಗ ನಡೆಯುತ್ತಿರುವುದೆಲ್ಲವೂ ಕಾಂಗ್ರೆಸ್ ಅವಧಿಯಲ್ಲೇ ಮಂಜೂರುಗೊಂಡವಾಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರಕಾರ ಆಡಳಿತಕ್ಕೆ ಬಂದರೆ ಕೇಂದ್ರದ ಗ್ಯಾರಂಟಿ ಜಾರಿಯಾಗಲಿದೆ ಎಂದು ರೈ ಹೇಳಿದರು.

ಬಂಟ್ವಾಳ ‌ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪಕ್ಷ ಪ್ರಮುಖರಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ, ಪದ್ಮಶೇಖರ್ ಜೈನ್, ಮಾಯಿಲಪ್ಪ ಸಾಲ್ಯಾನ್, ಶಬೀರ್ ಸಿದ್ಧಕಟ್ಟೆ, ವೆಂಕಪ್ಪ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

 

 

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts