ಪಾಣೆಮಂಗಳೂರು ಹಾಗೂ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಗುರುವಾರ ಸಂಜೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಭ್ಯರ್ಥಿ ಆರ್. ಪದ್ಮರಾಜ್ ಪರವಾಗಿ ರೋಡ್ ಶೋ ಮೆಲ್ಕಾರ್ ನಿಂದ ನಡೆಯಿತು.
ಮೆಲ್ಕಾರ್ ಜಂಕ್ಷನ್ ನಿಂದ ಸುಭಾಶ್ ನಗರದವರೆಗೆ ರೋಡ್ ಶೋ ಸಾಗಿ ಬಂತು. ಈ ಸಂದರ್ಭ ಬೈಕ್ ಗಳಲ್ಲಿ ಕಾರ್ಯಕರ್ತರು ಪಕ್ಷದ ಪರವಾಗಿ ಘೋಷಣೆ ಗಳೊಂದಿಗೆ ಸಾಗಿದರು.
ಬಳಿಕ ಸುಭಾಶ್ ನಗರ ದಲ್ಲಿ ಪ್ರಚಾರ ಸಭೆ ನಡೆಯಿತು. ಮಾಜಿ ಸಚಿವ ಬಿ.ರಮಾನಾಥ ರೈ, ಪಕ್ಷದ ಪ್ರಮುಖರಾದ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ಪಾಣೆಮಂಗಳೂರು ಬ್ಲಾಕ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಪ್ರಮುಖರಾದ ಅಶ್ವನಿ ಕುಮಾರ್ ರೈ, ಪಿಯೂಸ್ ಎಲ್. ರೋಡ್ರಿಗಸ್ ಸಂಜೀವ ಪೂಜಾರಿ, ಸುದರ್ಶನ ಜೈನ್, ಚಂದ್ರಪ್ರಕಾಶ್ ಶೆಟ್ಟಿ, ಅಬ್ಬಾಸ್ ಆಲಿ, ಜಯಂತಿ ಪೂಜಾರಿ ಸಹಿತ ಪ್ರಮುಖರು ಉಪಸ್ಥಿತರಿದ್ದರು.