ಲೋಕಸಭಾ ಚುನಾವಣೆ: ಬಂಟ್ವಾಳ ಕ್ಷೇತ್ರದ ಚುನಾವಣಾ ಮಸ್ಟರಿಂಗ್ ಕಾರ್ಯ

ಲೋಕಸಭಾ ಚುನಾವಣೆ 2024 ರ ಹಿನ್ನೆಲೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಮಸ್ಟರಿಂಗ್ ಕಾರ್ಯವು ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮತ್ತು ಕನ್ನಡ ಮಾಧ್ಯಮ ಶಾಲೆಯಲ್ಲಿ ನಡೆಯಿತು. ಐವರು ಮಾಸ್ಟರ್ ಟ್ರೈನರ್ ಗಳ ನೇತೃತ್ವದಲ್ಲಿ 25 ಸೆಕ್ಟರ್ ಅಧಿಕಾರಿಗಳು 25 ಕೊಠಡಿಗಳಲ್ಲಿ ಮಸ್ಟರಿಂಗ್ ಕಾರ್ಯವನ್ನು ನಡೆಸಿಕೊಟ್ಟರು.

ಜಾಹೀರಾತು

ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ 249 ಮತಗಟ್ಟೆಗಳಿದ್ದು ಪ್ರತಿ ಮತಗಟ್ಟೆಗೂ ತಲಾ ಒಬ್ಬರು ಪಿ .ಆರ್ .ಓ ಒಬ್ಬರು ಎ.ಪಿ.ಆರ್.ಓ ಮತ್ತು ಇಬ್ಬರು ಪಿ.ಓ ಹಾಗೂ ಒಬ್ಬರು ಡಿ ಗ್ರೂಪ್ ಮತ್ತು ಒಬ್ಬರು ಪೊಲೀಸ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. 92 ವಾಹನ ಪಥಗಳ ವ್ಯವಸ್ಥೆ ರೂಪಿಸಲಾಗಿದ್ದು ಎಲ್ಲ ಮತಗಟ್ಟೆ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಿಗೆ ಚುನಾವಣಾ ಸಾಮಾಗ್ರಿಗಳೊಂದಿಗೆ ತೆರಳಿದರು. 118 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಗೆ ವ್ಯವಸ್ಥೆಯನ್ನು ಮಾಡಲಾಗಿರುತ್ತದೆ.

ಜಾಹೀರಾತು

ಸೂಕ್ಷ್ಮ ಪ್ರದೇಶದಲ್ಲಿ 14 ಮೈಕ್ರೋ ಆಬ್ಸರ್ ವರ್ ಗಳನ್ನು ನಿಯೋಜಿಸಲಾಗಿರುತ್ತದೆ. ಐದು ಸಖಿ ಮತಗಟ್ಟೆಗಳಿದ್ದು ಮಹಿಳೆಯರಿಂದಲೇ ನಿರ್ವಹಿಸಲ್ಪಡುತ್ತದೆ. ಒಂದು ಸಾಂಪ್ರದಾಯಿಕ ಮತಗಟ್ಟೆ,
ಒಂದು ಯುವ ಮತದಾರರ ಮತಗಟ್ಟೆ, ಒಂದು ವಿಶೇಷ ಚೇತನರ ಮತಗಟ್ಟೆ ಕಾರ್ಯನಿರ್ವಹಿಸಲಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ವೀಕ್ಷಕರು ಮತ್ತು ಎಸ್ಪಿ ಅವರು ಮಸ್ಟರಿಂಗ್ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು

. ಬಂಟ್ವಾಳ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾ ಅಧಿಕಾರಿ ಡಾ. ಉದಯ ಶೆಟ್ಟಿ, ತಹಶೀಲ್ದಾರ್ ಅರ್ಚನಾ ಭಟ್, ವಿವಿಧ ಇಲಾಖೆಗಳ ಅಧಿಕಾರಿಗಳು, ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಗಳು, ಗ್ರಾಮ ಸಹಾಯಕರು, ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

Be the first to comment on "ಲೋಕಸಭಾ ಚುನಾವಣೆ: ಬಂಟ್ವಾಳ ಕ್ಷೇತ್ರದ ಚುನಾವಣಾ ಮಸ್ಟರಿಂಗ್ ಕಾರ್ಯ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*