ಯಕ್ಷಧ್ರುವ ಪಟ್ಲ ಫೌಂಡೇಶನ್ ತಾಲೂಕು ಘಟಕದ ಸಭೆ

ಯಕ್ಷಧ್ರುವ ಪಟ್ಲ ಫೌಂಡೇಶನ್ ಮಂಗಳೂರು ಬಂಟ್ವಾಳ ತಾಲೂಕು ಘಟಕದ ಸಭೆ ಬಿ.ಸಿ.ರೋಡಿನ ರಂಗೋಲಿ ಸಭಾಂಗಣದಲ್ಲಿ ಶನಿವಾರ ಸಂಜೆ ಘಟಕದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆಯಿತು.

ಮೇ.7 ಮಂಗಳವಾರ ಬಿ.ಸಿ.ರೋಡಿನ ಅನ್ನಪೂರ್ಣೇಶ್ವರೀ ದೇವಸ್ಥಾನದ ವಠಾರದಲ್ಲಿ ನಡೆಯಲಿರುವ ಬಂಟ್ವಾಳ ಘಟಕದ ಪ್ರಥಮ ವಾರ್ಷಿಕೋತ್ಸವದ ಆಮಂತ್ರಣ ಪತ್ರವನ್ನು ಬಿಡುಗಡೆಗೊಳಿಸಲಾಯಿತು. ಬಳಿಕ ಕಾರ್ಯಕ್ರಮದ ಬಗ್ಗೆ ಚರ್ಚೆ ನಡೆಸಲಾಯಿತು.

ನ್ಯಾಯವಾದಿ ಪ್ರಸಾದ್ ಕುಮಾರ್ ರೈ, ಯಕ್ಷಗಾನ ಕಲಾವಿದ ಅಶೋಕ್ ಶೆಟ್ಟಿ ಸರಪಾಡಿ, ಪತ್ರಕರ್ತ ರತ್ನದೇವ್ ಪೂಂಜಲಕಟ್ಟೆ, ಕಲಾವಿದ ನಾರಾಯಣ ಸಿ. ಪೆರ್ನೆ ಅನಿಸಿಕೆ ವ್ಯಕ್ತಪಡಿಸಿದರು. ಉಪಾಧ್ಯಕ್ಷರಾದ ಭುಜಂಗ ಸಾಲಿಯಾನ್ ಬಿ.ಸಿ.ರೋಡು, ಜಯಪ್ರಕಾಶ್ ಜಕ್ರಿಬೆಟ್ಟು, ಕೋಶಾಧಿಕಾರಿ ಶಂಕರ ಶೆಟ್ಟಿ ಪರಾರಿಗುತ್ತು ಉಪಸ್ಥಿತರಿದ್ದರು. ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪಾಧ್ಯಕ್ಷ ಚಿತ್ತರಂಜನ್ ಶೆಟ್ಟಿ ಬೊಂಡಾಲ ವಂದಿಸಿದರು. ಪ್ರಧಾನ ಕಾರ್ಯದರ್ಶಿ ದೇವದಾಸ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯಕ್ಷಧ್ರುವ ಪಟ್ಲ ಫೌಂಡೇಶನ್ ತಾಲೂಕು ಘಟಕದ ಸಭೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*