ಬಂಟ್ವಾಳದಲ್ಲಿ ಎಐಟಿಯುಸಿ ವತಿಯಿಂದ ಮೇ ದಿನಾಚರಣೆ

ಮೋದಿ ನೇತೃತ್ವದ ಎನ್ ಡಿ ಎ ಮೈತ್ರಿಕೂಟ ಮಗದೊಮ್ಮೆ ಅಧಿಕಾರಕ್ಕೆ ಬಂದರೆ  ಕಾರ್ಮಿಕ ಕಾಯ್ದೆ ಕಾನೂನುಗಳು ಕೈ ತಪ್ಪಿ ಹೋಗಲಿದೆ. ಎಂದು ಆಲ್ ಇಂಡಿಯಾ ಟ್ರೇಡ್ ಯೂನಿಯನ್ ಕಾಂಗ್ರೆಸ್ (ಎಐಟಿಯುಸಿ) ಜಿಲ್ಲಾ ಉಪಾಧ್ಯಕ್ಷ ಬಿ.ಶೇಖರ್ ಅಭಿಪ್ರಾಯಪಟ್ಟರು.

ಜಾಹೀರಾತು

ಬಂಟ್ವಾಳದ ಎ.ಶಾಂತಾರಾಂ ಪೈ ಸ್ಮಾರಕ ಭವನದಲ್ಲಿ ಎಐಟಿಯುಸಿ ಬಂಟ್ವಾಳ ತಾಲೂಕು ಸಮಿತಿ ಆಶ್ರಯದಲ್ಲಿ ಜರುಗಿದ ಮೇ ದಿನಾಚರಣೆ 2024 ಸಾರ್ವಜನಿಕ ಸಭೆಯನ್ನುದ್ಧೇಶಿಸಿ ಮಾತನಾಡುತ್ತಿದ್ದರು.

ಈಗಾಗಲೇ ಕೇಂದ್ರ ಸರ್ಕಾರ ಕಾರ್ಮಿಕ ಕಾಯ್ದೆಗೆ ತಿದ್ದುಪಡಿ ತಂದು ಕೋಡ್ ಗಳಾಗಿ ಮಾರ್ಪಾಡು ಮಾಡಿದ ಪರಿಣಾಮ ಹಲವಾರು  ಕಾನೂನುಗಳು ವಜಾಗೊಂಡಿದೆ.ಎಂದರು. ಸಾರ್ವಜನಿಕ ಸಭೆಗೆ ಮುನ್ನ  ಧ್ವಜಾರೋಹಣ ನಡೆಯಿತು.

ಎಐಟಿಯುಸಿ ಬಂಟ್ವಾಳ ತಾಲೂಕಿನ ಹಿರಿಯ ಮುಖಂಡ ಬಿ.ಬಾಬು ಭಂಡಾರಿ ಧ್ವಜಾರೋಹಣ ನೆರವೇರಿಸಿ ಸಾರ್ವಜನಿಕ ಸಭೆ ಅಧ್ಯಕ್ಷತೆ ವಹಿಸಿದ್ದರು. ಎಐಟಿಯುಸಿ ಜಿಲ್ಲಾ ನಾಯಕಿ ಶಮಿತಾ, ಎಐಟಿಯುಸಿ ಜಿಲ್ಲಾ ಯುವ ನಾಯಕ ಪ್ರೇಮನಾಥ ಕೆ ಉಪಸ್ಥಿತರಿದ್ದರು. ನೇತೃತ್ವವನ್ನು ಎಐವೈಎಫ್ ನ ಬಂಟ್ವಾಳದ ನಾಯಕ ಹರ್ಷಿತ್, ಮೋಹನ್ ಅರಳ, ಸುರೇಶ್ ಕೆ,  ಭಾರತೀಯ  ಮಹಿಳಾ ಒಕ್ಕೂಟ ದ ವನಜಾಕ್ಷಿ, ಸರೋಜಿನಿ, ಕುಸುಮಾ ವಹಿಸಿದ್ದರು. ಎಐಟಿಯುಸಿ ಜಿಲ್ಲಾ ಸಹಕಾರ್ಯದರ್ಶಿ ಸುರೇಶ್ ಕುಮಾರ್ ಬಂಟ್ವಾಳ್ ಸ್ವಾಗತಿಸಿ ವಂದಿಸಿದರು.

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಬಂಟ್ವಾಳದಲ್ಲಿ ಎಐಟಿಯುಸಿ ವತಿಯಿಂದ ಮೇ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*