ಬಿ.ಸಿ.ರೋಡಿನ ಸೇತುವೆಯಲ್ಲಿ ಗುರುವಾರ ಟಿಪ್ಪರ್ ಡಿಕ್ಕಿಯಾಗಿ ಸ್ಕೂಟರ್ ಸವಾರನೋರ್ವ ಸಾವನ್ನಪ್ಪಿದ್ದಾರೆ. ನರಿಕೊಂಬು ಗ್ರಾಮದ ಪೊಯಿತ್ತಾಜೆ ಎಂಬಲ್ಲಿನ ನಿವಾಸಿ ನರಿಕೊಂಬು ಗ್ರಾಮದಲ್ಲಿ ಕುಡಿಯುವ ನೀರು ಸರಬರಾಜು ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದ ಸುಬ್ಬಣ್ಣ ಭಂಡಾರಿ (68) ಅವರು ಸಾವನ್ನಪ್ಪಿದವರು. ಅವರು ಪತ್ನಿ, ಪುತ್ರ ಮತ್ತು ಪುತ್ರಿಯನ್ನು ಹೊಂದಿದ್ದರು.
ಸುಬ್ಬಣ್ಣ ಭಂಡಾರಿ ಅವರು ಸ್ಕೂಟಿಯಲ್ಲಿ ಸಂಚರಿಸುತ್ತಿದ್ದು, ಅವರು ಸಾಗುತ್ತಿದ್ದಾಗ ಟಿಪ್ಪರ್ ಡಿಕ್ಕಿಯಾಗಿ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ವಾಹನವೂ ನಜ್ಜುಗುಜ್ಜಾಗಿದೆ. ಅಪಘಾತ ನಡೆದ ಸಂದರ್ಭ ಕೆಲಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ಬಂಟ್ವಾಳ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.