ಕುಡಿಯುವ ನೀರಿನ ಕೊರತೆ ಉದ್ಭವಿಸಿರುವ ಹಿನ್ನೆಲೆಯಲ್ಲಿ ಬಂಟ್ವಾಳದಲ್ಲಿ ಕಂಟ್ರೋಲ್ ರೂಮ್ ಸ್ಥಾಪನೆ ಮಾಡಲಾಗಿದೆ. ಸಂಭಾವ್ಯ ಸಮಸ್ಯೆ ಎದುರಿಸಲು ಬಂಟ್ವಾಳ ತಾಲೂಕಾಡಳಿತ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೂಚನೆಯಂತೆ ಕಂಟ್ರೋಲ್ ರೂಮ್ ಸ್ಥಾಪಿಸಿದೆ. ಟ್ರೋಲ್ ರೂಂ ಸಂಖ್ಯೆ 08255-232500 ಆಗಿರುತ್ತದೆ. ಸಾರ್ವಜನಿಕರು ಕುಡಿಯುವ ನೀರಿನ ಸಮಸ್ಯೆ ಹಾಗೂ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ಕಂಟ್ರೋಲ್ ರೂಂ ಸಂಖ್ಯೆಗೆ ಸಂಪರ್ಕಿಸಿ ಪರಿಹಾರ ಕಂಡುಕೊಳ್ಳಬಹುದು ಎಂದು ತಾಲೂಕು ತಹಶೀಲ್ದಾರ್ ಅರ್ಚನಾ ಭಟ್ ತಿಳಿಸಿದ್ದಾರೆ.