ಬಂಟ್ವಾಳ

ಪ್ರಾಕೃತಿಕ ವಿಕೋಪ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ: ಬಂಟ್ವಾಳ ತಹಸೀಲ್ದಾರ್ ನೇತೃತ್ವದ ಸಭೆಯಲ್ಲಿ ಸೂಚನೆ

ಗಣಿಗಾರಿಕೆಯ ಹೊಂಡಕ್ಕೆ ತಡೆಬೇಲಿ ಹಾಕುವುದು ಸಹಿತ ಹಲವು ವಿಚಾರಗಳು ಶನಿವಾರ ಬಂಟ್ವಾಳ ತಾಪಂ ಸಭಾಂಗಣದಲ್ಲಿ ನಡೆದ ಪ್ರಾಕೃತಿಕ ವಿಕೋಪ ನಿರ್ವಹಣೆ ಮತ್ತು ಕುಡಿಯುವ ನೀರಿನ ಸಮಸ್ಯೆ ಕುರಿತ ತಹಸೀಲ್ದಾರ್ ಅರ್ಚನಾ ಡಿ. ಭಟ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆಗೆ ಬಂದವು.

ಕುಡಿಯುವ ನೀರಿನ ಸಮಸ್ಯೆ ಮತ್ತು ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಸಭೆಯಲ್ಲಿ ನೀಡಿರುವ ನಿರ್ದೇಶನದಂತೆ ಬಂಟ್ವಾಳ ತಾಪಂ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಸಭೆ ನಡೆಯಿತು.

ನಗರ ಮತ್ತು ಗ್ರಾಮ ಮಟ್ಟದಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆ ಬಗ್ಗೆ ಕ್ರಿಯಾ ಯೋಜನೆ ಸಿದ್ದಪಡಿಸುವುದು. ಅಪಾಯಕಾರಿ ಪ್ರದೇಶಗಳು ಅಂದರೆ ಪ್ರವಾಹ ಭೂ ಕುಸಿತ ಉಂಟಾಗಬಹುದಾದ ಸ್ಥಳಗಳನ್ನು ಗುರುತಿಸುವುದು ಮತ್ತು ವಿಪರೀತ ಮಳೆಯ ಸಮಯ ಸದ್ರಿ ಪ್ರದೇಶಗಳಲ್ಲಿ ತೀವ್ರ ನಿಗಾ ವಹಿಸುವುದು  ಗಣಿಗಾರಿಕೆಯಿಂದ ಉಂಟಾಗಿರುವ ಹೊಂಡ ಗಳಲ್ಲಿ ಮಳೆಗಾಲದಲ್ಲಿ ನೀರು ನಿಂತು ಜನ ಮತ್ತು ಜಾನುವಾರು ಗಳ ಜೀವ ಹಾನಿಯಾಗುವ ಸಂಭವ ಇರುವುದರಿಂದ ಪ್ರದೇಶಗಳಲ್ಲಿ ಸುತ್ತಲೂ ಬೇಲಿ ಅಥವಾ ತಡೆ ನಿರ್ಮಿಸುವುದು. ಮತ್ತು ಆ ಕಡೆ ತೆರಳದಂತೆ ಎಚ್ಚರಿಕೆ ಫಲಕ ಹಾಕುವುದು . ಶಾಲಾ ಕಾಲೇಜು ಅಂಗನವಾಡಿ ಕಟ್ಟಡಗಳನ್ನು ಪರಿಶೀಲಿಸಿ ಸುಸ್ಥಿತಿಯಲ್ಲಿ ಇರುವಂತೆ ಕ್ರಮವಹಿಸುವುದು ಗ್ರಾಮಪಂಚಾಯಿತಿ, ಜಿಲ್ಲಾಪಂಚಾಯತ್, ಪಿಡಬ್ಲ್ಯುಡಿ ರಸ್ತೆಗಳ ಇಕ್ಕೆಳಗಲ್ಲಿ ಇರುವ ಚರಂಡಿಗಳಲ್ಲಿ ನೀರು ಸರಾಗವಾಗಿ ಹರಿದು ಹೋಗುವಂತೆ ಕಸ ಕಡ್ಡಿಗಳನ್ನು ತೆಗೆದು ಸ್ವಚ್ಛಗೊಳಿಸುವ ಕುರಿತು ಸ್ಪಷ್ಟ ಸೂಚನೆಯನ್ನು ತಹಸೀಲ್ದಾರ್ ನೀಡಿದ್ದಾರೆ.ಸಭೆಯಲ್ಲಿ ತಾಪಂ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಕಾಂಬ್ಳೆ, ಅಧಿಕಾರಿಗಳಾದ ಜಿ.ಕೆ.ನಾಯ್ಕ್, ತಾರಾನಾಥ ಸಾಲಿಯಾನ್ ಮತ್ತಿತರರು ಉಪಸ್ಥಿತರಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Recent Posts

ಬಿ.ಸಿ.ರೋಡ್ ನಲ್ಲಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…

22 hours ago