ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ನಾವೂರ ಎಂಬಲ್ಲಿ ಇಂದು ಸಂಜೆ ನಡೆದಿದೆ. ಉಳ್ಳಾಲ ನಿವಾಸಿಗಳಾದ ಅನ್ಸಾರ್ ಅವರ ಪುತ್ರಿ ಅಶ್ರಾ (11) ಹಾಗೂ ಇಲಿಯಾಸ್ ಅವರ ಪುತ್ರಿ ಮರಿಯಮ್ ನಾಶೀಯಾ (14 ) ಮೃತರಾದ ಬಾಲಕಿಯರು.
ಮೂಲತಃ ನಾವೂರ ನಿವಾಸಿಯಾದ ಇಲಿಯಾಸ್ ಅವರು ಇತ್ತೀಚಿಗೆ ಉಳ್ಳಾಲದಲ್ಲಿ ಮನೆ ಕಟ್ಟಿದ್ದರು. ಇವತ್ತು ನಾವೂರ ಮೈಂದಾಳದಲ್ಲಿರುವ ಸಂಬಂಧಿಕರ ಮನೆಗೆ ಬಂದಿದ್ದರು. ಸಂಜೆ ವೇಳೆ ಮನೆಯವರ ಜೊತೆಗೆ ನಾವೂರದ ನೀರಕಟ್ಟೆ ಎಂಬಲ್ಲಿ ನೇತ್ರಾವತಿ ನದಿಗೆ ತೆರಳಿದ್ದರು. ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ