ಬಿ.ಸಿ.ರೋಡಿನ ಕನ್ನಡ ಭವನ ದಲ್ಲಿ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ನಡೆಯಿತು. ಈ ಸಂದರ್ಭ ಸದಸ್ಯ, ಸಂಘಟಕ, ಕವಿ ಅಬುಬಕರ್ ಅಮ್ಮುಂಜೆ ಮಾತನಾಡಿ, ಪರಿಷತ್ತಿನ ಉದ್ದೇಶವನ್ನು ಕನ್ನಡಿಗರಿಗೆ ತಿಳಿಸುವಂತಹ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸುವುದು ಅಗತ್ಯ ಎಂದರು.
ವಿಟ್ಲ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಗಣೇಶ ಪ್ರಸಾದ ಪಾಂಡೇಲು ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕದ ಸಾರಥ್ಯವನ್ನು ನೀರ್ಪಾಜೆ ಭೀಮ ಭಟ್ಟರಿಂದ ವಿಶ್ವನಾಥ ಬಂಟ್ವಾಳ ತನಕ ಹಲವರು ಸಮರ್ಥವಾಗಿ ನಿರ್ವಹಿಸಿದ್ದಾರೆ ಎಂದರು
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಅವರು ಅಮ್ಮುಂಜೆಯಲ್ಲಿ ನಡೆದ ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಉಲ್ಲೇಖಿಸಿ ರಾಜ್ಯಕ್ಕೆ ಮಾದರಿ ಎನಿಸಿದ ಇಂತಹ ಸಮ್ಮೇಳನಗಳು ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿ ನಡೆಯಬೇಕು ಎಂದರು. ಕಾರ್ಯಕಾರಿ ಸಮಿತಿ ಸದಸ್ಯ ಜಯರಾಮ ಪಡ್ರೆ ಸ್ವಾಗತಿಸಿ, ವಂದಿಸಿದರು. ಪ್ರಸ್ತಾವನೆಗೈದ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ವಿ.ಸು. ಭಟ್ ಅವರು ಕಾರ್ಯಕ್ರಮ ನಿರೂಪಿಸಿದರು
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…