ಕಾರಿನ ಚಾಲಕರಿಗೆ ಸೈಡ್ ಕೊಟ್ಟಿಲ್ಲ ಕಾರಣಕ್ಕಾಗಿ ಕೆ.ಎಸ್.ಆರ್.ಟಿ.ಸಿ.ಬಸ್ ಚಾಲಕನಿಗೆ ಅಪರಿಚಿತರ ತಂಡವೊಂದು ಹಲ್ಲೆ ನಡೆಸಿ, ಬಸ್ ಗೆ ಹಾನಿಗೊಳಿಸಿದ ಘಟನೆ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ಭಾನುವಾರ ಸಂಜೆ ನಡೆದಿದ್ದು, ಇದೀಗ ಚಾಲಕ ನೀಡಿದ ದೂರಿನಂತೆ ಪ್ರಕರಣ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಪುಂಜಾಲಕಟ್ಟೆ ನಿವಾಸಿ ಕೃಷ್ಣಪ್ಪ ಅವರು ಬಸ್ ಚಾಲಕ, ಘಟನೆಯಿಂದ ಸುಮಾರು 30 ಸಾವಿರ ರೂ ನಷ್ಟ ಸಂಭವಿಸಿದೆ. ಕೆ.ಎಸ್.ಆರ್.ಟಿ.ಸಿ.ಗೆ ಬಸ್ ಗೆ ಕಾರು ಅಡ್ಡಗಟ್ಟಿ ಜಖಂಗೊಳಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ತಂಡದ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕೃಷ್ಣಪ್ಪ ದೂರಿನಲ್ಲಿ ತಿಳಿಸಿದ್ದಾರೆ. ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ದಾಸಕೋಡಿ ಎಂಬಲ್ಲಿ ಘಟನೆ ನಡೆದಿದ್ದು, ಮಂಗಳೂರು ಡಿಪೋದಿಂದ ಸೋಮವಾರಪೇಟೆಗೆ ಪ್ರಯಾಣಿಕರನ್ನು ಕರೆದುಕೊಂಡು ಹೋಗುವ ಮಾರ್ಗದಲ್ಲಿ ಸುಮಾರು 4 ಗಂಟೆಗೆ ದಾಸಕೋಡಿಗೆ ಬಸ್ ತಲುಪಿದಾಗ ಕಾರುಗಳಲ್ಲಿ ಬಂದ ಆರು ಜನರು ಕಲ್ಲಡ್ಕ ಏಕಮುಖ ರಸ್ತೆಯಲ್ಲಿ ಈ ಎರಡು ಕಾರುಗಳಿಗೆ ಮುಂದೆ ಹೋಗಲು ಸೈಡ್ ಕೊಟ್ಟಿಲ್ಲ ಎಂಬ ಆರೋಪ ಮಾಡಿದರು. ಬಳಿಕ ಕೆ.ಎಸ್.ಆರ್.ಟಿ.ಸಿ.ಬಸ್ಸನ್ನು ಅಡ್ಡಗಟ್ಟಿ ಬಸ್ ನ ಸೈಡ್ ಮಿರರನ್ನು ಕಲ್ಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ. ಬಳಿಕ ಚಾಲಕ ಕೃಷ್ಣಪ್ಪ ಅವರನ್ನು ಸೀಟಿನಿಂದ ಎಳೆದುಹಾಕಿ ಕೈಯಿಂದ ಹಣೆಗೆ ಮುಖಕ್ಕೆ ಎಡಕೈಗೆ ಹಿಗ್ಗಾಮುಗ್ಗ ಹೊಡೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ. ಜೊತೆಗೆ ಬಸ್ ನ ಎದುರು ಭಾಗದ ಗಾಜನ್ನು ಕೈಯಿಂದ ಗುದ್ದಿ ಜಖಂ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಅದರಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…