ಬಿ.ಸಿ.ರೋಡಿನ ಕೃಷ್ಣಿಮಾ ಹೋಟೆಲ್ ನಲ್ಲಿ ನೇಣು ಬಿಗಿದುಕೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಂಗಳೂರಿನ ಅತ್ತಾವರ ನಿವಾಸಿ ಖಾಸಗಿ ಕಂಪನಿ ಉದ್ಯೋಗಿ ಪ್ರಜ್ವಲ್ (30) ಸಾವನ್ನಪ್ಪಿದವರು.
ಅವಿವಾಹಿತರಾಗಿದ್ದ ಇವರು, ಮೇ. 5 ರಂದು ರೂಮ್ ಮಾಡಿದ್ದರು ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ರೂಮ್ ನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಯಾವುದೇ ಸ್ಪಂದನೆ ಇಲ್ಲದ ಕಾರಣ ಪೋಲೀಸರಿಗೆ ಮಾಹಿತಿ ನೀಡಲಾಯಿತು. ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹದ ಪತ್ತೆಯಾಗಿದೆ. ಪ್ರಜ್ವಲ್ ಸಾವಿಗೆ ಏನು ಕಾರಣ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Be the first to comment on "ಬಿ.ಸಿ.ರೋಡ್ ಹೋಟೆಲ್ ನಲ್ಲಿ ಯುವಕ ಆತ್ಮಹತ್ಯೆ"