ಕಲ್ಲಡ್ಕ

ಗ್ರಾಮ ಸುಭಿಕ್ಷ ಕಾರ್ಯಕ್ರಮದ ಅಂಗವಾಗಿ ನೆಟ್ಲ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ ಸೀಯಾಳ ಅಭಿಷೇಕ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್( ರಿ )ನ ಕಲ್ಲಡ್ಕ ವಲಯ ವತಿಯಿಂದ ಗ್ರಾಮಾಭಿವೃದ್ಧಿ ಯೋಜನೆಯ ಸ್ವ-ಸಹಾಯ ಸಂಘಗಳ ಒಕ್ಕೂಟ,  ಜನಜಾಗೃತಿ ವೇದಿಕೆ ಕಲ್ಲಡ್ಕ ವಲಯ, ಶೌರ್ಯ ವಿಪತು ನಿರ್ವಹಣಾ ಘಟಕ ಕಲ್ಲಡ್ಕ ಆಶ್ರಯದಲ್ಲಿ ಗ್ರಾಮ ಸುಭಿಕ್ಷಾ ಕಾರ್ಯಕ್ರಮದ ಅಂಗವಾಗಿ ಬಂಟ್ವಾಳ ತಾಲೂಕಿನ ಗೋಳ್ತಮಜಲು ಗ್ರಾಮದ ನೆಟ್ಲಾ ಶ್ರೀ ನಿಟಿಲಾಕ್ಷ ಸದಾಶಿವ ದೇವಸ್ಥಾನದಲ್ಲಿ  ಸೀಯಾಳ ಅಭಿಷೇಕ ನಡೆಯಿತು.

ಜಾಹೀರಾತು

ಕಾಲಕಾಲಕ್ಕೆ ಸರಿಯಾಗಿ ಮಳೆ ಬಂದು ಉತ್ತಮ ಬೆಲೆ ಬೆಳೆದು, ಯಾವುದೇ ರೀತಿಯ ಪ್ರಕೃತಿ ವಿಕೋಪಗಳು ನಡೆಯದಂತೆ, ಗ್ರಾಮದ ಜನರಿಗೆ ಉತ್ತಮ ಆರೋಗ್ಯ ನೆಮ್ಮದಿ ನೀಡುವ ಸಲುವಾಗಿ ಶ್ರೀ ನಿಟಿಲಾಕ್ಷನಿಗೆ  ಸುಮಾರು 500ಕ್ಕೂ ಹೆಚ್ಚು ಸೀಯಾಳ ಅಭಿಷೇಕ ಮಾಡಲಾಯಿತು. ಬಲಿಕ ಸಾರ್ವಜನಿಕ ಅನ್ನದಾನದ ವ್ಯವಸ್ಥೆ ಕಲ್ಪಿಸಲಾಗಿತ್ತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಲಡ್ಕ ವಲಯ ಅಧ್ಯಕ್ಷೆ ತುಳಸಿ, ಜನಜಾಗೃತಿ ವೇದಿಕೆಯ  ಕಲ್ಲಡ್ಕ ವಲಯ ಅಧ್ಯಕ್ಷ ಭಟ್ಯಪ್ಪ ಶೆಟ್ಟಿ, ಕಲ್ಲಡ್ಕ ಶೌರ್ಯ ವೀಪತು ನಿರ್ವಹಣಾ ಘಟಕ ಅಧ್ಯಕ್ಷ ಮಾಧವ ಸಾಲಿಯಾನ್ , ಯೋಜನೆಯ ಕಲ್ಲಡ್ಕ  ವಲಯ ಮೇಲ್ವಿಚಾರಕಿ ಸುಗುಣಶೆಟ್ಟಿ, ಕಲ್ಲಡ್ಕ ವಲಯಕ್ಕೆ ಸಂಬಂಧಪಟ್ಟ ಒಕ್ಕೂಟಗಳ ಅಧ್ಯಕ್ಷರುಗಳು, ಸೇವಾ ಪ್ರತಿನಿಧಿಗಳು, ಸ್ವ ಸಹಾಯ ಸಂಘದ ಸದಸ್ಯರುಗಳು, ಶೌರ್ಯ ತಂಡದ ಸದಸ್ಯರುಗಳು, ಉಪಸ್ಥಿತರಿದ್ದರು.

ಜಾಹೀರಾತು

ಜಾಹೀರಾತು

 

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ