ಫರಂಗಿಪೇಟೆ: ಮಾರಿಪಳ್ಳದಲ್ಲಿ ಮಂಗಳವಾರ ಸಂಜೆ ಲಾರಿಯಡಿ ಬೈಕ್ ಬಿದ್ದು ನಡೆದ ಅಪಘಾತದಲ್ಲಿ ಸೋನು (19) ಎಂಬಾತ ಸಾವನ್ನಪ್ಪಿದ್ದು, ಮತ್ತೋರ್ವ ಪ್ರಸಾದ್ ಎಂಬಾತ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇವರಿಬ್ಬರೂ ಬೈಕ್ ಸವಾರರು.
ನೆಲ್ಯಾಡಿಯ ಹೋಟೆಲ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರಪ್ರದೇಶ ಮೂಲದ ಸೋನು ಮತ್ತು ಕಾರ್ಕಳ ನಿವಾಸಿ ಪ್ರಸಾದ್, ಮಂಗಳೂರಿಗೆ ತೆರಳುತ್ತಿದ್ದ ಸಂದರ್ಭ ಮಾರಿಪಳ್ಳ ಜಂಕ್ಷನ್ ನಲ್ಲಿ ಇರಿಸಲಾಗಿದ್ದ ಬ್ಯಾರಿಕೇಟ್ ಗೆ ಡಿಕ್ಕಿ ಹೊಡೆದಿದ್ದಾರೆ. ಲಾರಿಯೊಂದನ್ನು ಓವರ್ ಟೇಕ್ ಮಾಡುವ ಸಂದರ್ಭ ಬ್ಯಾರಿಕೇಟ್ ಗಮನಿಸದೆ ಈ ಅವಘಡ ನಡೆದಿದೆ. ಈ ಸಂದರ್ಭ ಇಬ್ಬರೂ ರಸ್ತೆಗೆಸೆಯಲ್ಪಟ್ಟು, ಲಾರಿಯ ಚಕದ್ರದಡಿ ಬಿದ್ದಿದ್ದಾರೆ. ಈ ಸಂದರ್ಭ ಸೋನು ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಮಾರಿಪಳ್ಳದಲ್ಲಿ ಅಪಘಾತ, ಲಾರಿಯಡಿಗೆ ಬಿದ್ದು ಬೈಕ್ ಸವಾರ ಸಾವು, ಮತ್ತೋರ್ವ ಗಂಭೀರ"