ಪಾಣೆಮಂಗಳೂರು ಪೇಟೆಯಲ್ಲಿ ಸೋಮವಾರ ಸಂಜೆ ನಡೆದ ಘಟನೆಯಲ್ಲಿ ಆಟೊ ಬೈಕಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಆಟೊ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿದ್ದಾರೆ. ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟವರು. ಬಿಸಿರೋಡಿನಿಂದ ಬರುತ್ತಿದ್ದ ಆಟೊ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬರುತ್ತಿದ್ದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ಆಟೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪಲ್ಟಿಯಾಗುವ ಸಂದರ್ಭ ಆಟೊದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಗೆ ಎಸೆದ ರಭಸಕ್ಕೆ ಯುವಕನ ತಲೆಗೆ ಗಂಭೀರವಾದ ಗಾಯವಾಗಿತ್ತು. ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಢಿದ್ದಾರೆ.