ನೈಋತ್ಯ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆ ಹಿನ್ನೆಲೆಯಲ್ಲಿ ವಿಧಾನಸಭೆ ಬಂಟ್ವಾಳ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಸಭೆ ಬಂಟ್ವಾಳದ ಸ್ಪರ್ಶಾ ಕಲಾ ಮಂದಿರದಲ್ಲಿ ಸೋಮವಾರ ನಡೆಯಿತು.
ಬಿಜೆಪಿ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ, ತಾನು ಆರೆಸ್ಸೆಸ್ ಹಿನ್ನೆಲೆಯಿಂದ ಬಂದಿದ್ದು, ಮತದಾರರ ಆಶೋತ್ತರಗಳಿಗೆ ಸ್ಪಂದಿಸುವುದಾಗಿ ತಿಳಿಸಿ, ಪ್ರತಿಯೊಬ್ಬ ಕಾರ್ಯಕರ್ತನೂ ತಾನೇ ಅಭ್ಯರ್ಥಿ ಎಂದು ಭಾವಿಸಿ ಕೆಲಸ ಮಾಡಬೇಕು ಎಂದರು.
ಮೈತ್ರಿಕೂಟದ ಜೆಡಿಎಸ್ ನ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್.ಎಲ್.ಭೋಜೇಗೌಡ ಮಾತನಾಡಿ, ನರೇಂದ್ರ ಮೋದಿ ಅವರ ಕೈಗಳನ್ನು ಬಲಪಡಿಸಲು ವಿಧಾನಪರಿಷತ್ ನಲ್ಲೂ ಮೈತ್ರಿಕೂಟ ಕೆಲಸ ಮಾಡಲಿದೆ ಎಂದರು. ಪಠ್ಯಪುಸ್ತಕ ಬದಲಾವಣೆಯಲ್ಲಿ ರಾಜಕೀಯ ಹಸ್ತಕ್ಷೇಪ ಸಲ್ಲದು ಎಂದು ಇದೇ ಸಂದರ್ಭ ಅವರು ಅಭಿಪ್ರಾಯಪಟ್ಟರು.
ಶಾಸಕ ಯು. ರಾಜೇಶ್ ನಾಯ್ಕ್ ಮಾತನಾಡಿ, ಬಂಟ್ವಾಳ ಕ್ಷೇತ್ರದಲ್ಲಿ ಚುನಾವಣೆಯಲ್ಲಿ ಗರಿಷ್ಠ ಮತಗಳನ್ನು ನೀಡಲು ಕಾರ್ಯಕರ್ತರು ಕೆಲಸ ಮಾಡಬೇಕಾಗಿದ್ದು, ವಿಧಾನಪರಿಷತ್ ನ ಎರಡೂ ಸ್ಥಾನಗಳನ್ನು ಜಯಗಳಿಸಲು ಸಹಕರಿಸುವಂತೆ ಮತದಾರರಿಗೆ ಮನದಟ್ಟು ಮಾಡುವ ಕೆಲಸ ಆಗಬೇಕಾಗಿದೆ ಎಂದರು.
ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಮಾತನಾಡಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುವಂತೆ ಕೋರಿದರು.
ಉಡುಪಿ ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದು ಶುಭ ಹಾರೈಸಿದರು. ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಬೇಕಾದ ಅನಿವಾರ್ಯತೆ ಕುರಿತು ವಿವರಿಸಿದರು.
ಬಂಟ್ಚಾಳ ಕ್ಷೇತ್ರ ಅಧ್ಯಕ್ಷ ಚೆನ್ನಪ್ಪ ಆರ್ ಕೋಟ್ಯಾನ್, ಮಾಜಿ ಸಚಿವ ನಾಗರಾಜ ಶೆಟ್ಟಿ, ರಾಜ್ಯ ಪ್ರಕೋಷ್ಟದ ಸಂಚಾಲಕ ದತ್ತಾತ್ರೇಯ, ವಿಧಾನಪರಿಷತ್ ಮಾಜಿ ಸದಸ್ಯ ಕ್ಯಾ. ಗಣೇಶ್ ಕಾರ್ಣಿಕ್, ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪೈ,ಮಹಿಳಾ ಮೋರ್ಚಾದ ಜಿಲ್ಲಾ ಅಧ್ಯಕ್ಷೆ ಡಾ.ಮಂಜುಳಾ ಎ.ರಾವ್, ಜಿಲ್ಲಾ ಕಾರ್ಯದರ್ಶಿಗಳಾದ ದೇವಪ್ಪ ಪೂಜಾರಿ, ದಿನೇಶ್ ಅಮ್ಟೂರು, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್.ಸಿ ನಾರಾಯಣ ರೆಂಜ, ಜಿಲ್ಲಾ ಸಂಚಾಲಕ ವಿಕಾಸ್ ಪುತ್ತೂರು, ನಿಕಟಪೂರ್ವ ಜಿಲ್ಲಾ ಉಪಾಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಚುನಾವಣಾ ಸಹಸಂಚಾಲಕ ಸುರೇಶ್ ಕೋಟ್ಯಾನ್, ಜೆ.ಡಿ.ಎಸ್.ಜಿಲ್ಲಾ ಅಧ್ಯಕ್ಷ ಅಕ್ಷಿತ್ ಸುವರ್ಣ, ಬಂಟ್ವಾಳ ಮಂಡಲದ ಕಾರ್ಯದರ್ಶಿಗಳಾದ ರವೀಶ್ ಶೆಟ್ಟಿ ಕರ್ಕಳ ಉಪಸ್ಥಿತರಿದ್ದರು. ಸಂಚಾಲಕ ಮೋನಪ್ಪ ದೇವಸ್ಯ ಸ್ವಾಗತಿಸಿದರು. ಮಂಡಲದ ಕಾರ್ಯದರ್ಶಿ ಡೊಂಬಯ್ಯ ಅರಳ ಕಾರ್ಯಕ್ರಮ ನಿರೂಪಿಸಿದರು.ಸಹಸಂಚಾಲಕ ಸುರೇಶ್ ಕೋಟ್ಯಾನ್ ವಂದಿಸಿದರು.
ಕೆ.ಎನ್.ಆರ್. ಕನ್ಸಸ್ಟ್ರಕ್ಷನ್ಸ್ ಗುತ್ತಿಗೆ ವಹಿಸಿಕೊಂಡಿರುವ ಬಿ.ಸಿ.ರೋಡ್ ಭಾಗದ ಕಾಮಗಾರಿಯಲ್ಲಿ ಸೇತುವೆ ಪೂರ್ಣಗೊಳಿಸಿ ಓಡಾಟ ಆರಂಭಗೊಂಡಿರುವುದು ಮಹತ್ವದ ಹೆಜ್ಜೆಯಾಗಿದ್ದು, ಬಿ.ಸಿ.ರೋಡ್ ಸರ್ಕಲ್…