ಚಲಿಸುತ್ತಿದ್ದ ಕಾರಿನ ಮೇಲೆ ಮರ ಹಾಗೂ ವಿದ್ಯುತ್ ಕಂಬ ಬಿದ್ದು ಇಬ್ಬರು ಗಾಯಗೊಂಡ ಘಟನೆ ಮಾಣಿ – ಮೈಸೂರು ಹೆದ್ದಾರಿಯ ಕುಕ್ಕರಬೆಟ್ಟಿನಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ. ಕಾರು ನಜ್ಜುಗುಜ್ಜಾಗಿದೆ ಮಂಗಳೂರಿನಿಂದ ನಾಲ್ವರು ಕಾರಿನಲ್ಲಿ ಮೈಸೂರಿಗೆ ಹೋಗುತ್ತಿದ್ದಾಗ ಗಾಳಿ ಮಳೆಯ ಪರಿಣಾಮ ಈ ಘಟನೆ ನಡೆಯಿತು.ಗಾಯಾಳುಗಳಿಬ್ಬರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಪಾರಾಗಿದ್ದಾರೆ. ಘಟನೆ ನಡೆದ ತಕ್ಷಣ ಧಾವಿಸಿದ ಸ್ಥಳೀಯರು ಗಾಯಾಳುಗಳನ್ನು ಹೊರ ತೆಗೆದು ಉಪಚರಿಸಿ ಆಸ್ಪತ್ರೆಗೆ ಸಾಗಿಸಿದರು. ಘಟನೆಯಿಂದಾಗಿ ಹೆದ್ದಾರಿ ಸಂಚಾರ ಅಸ್ತವ್ಯಸ್ತಗೊಂಡಿತು