ದ್ವಿಚಕ್ರವಾಹನವೊಂದಕ್ಕೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ಬೋರ್ ವೆಲ್ ಕೊರೆಯುವ ಯಂತ್ರವನ್ನು ಕೊಂಡೊಯ್ಯುವ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ, ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ, ಮತ್ತೋರ್ವ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ರಾತ್ರಿ ಈ ಘಟನೆ ನಡೆದಿದೆ.
ಬಂಟ್ವಾಳ ತಾಲೂಕಿನ ನಾವೂರ ಸಮೀಪದ ಪರಾರಿ ಜಯ ಪೂಜಾರಿ (55) ಮೃತಪಟ್ಟ ವ್ಯಕ್ತಿಯಾಗಿದ್ದು, ಇವರ ಮಗ ರಕ್ಷಿತ್ ಸಹಸವಾರನಾಗಿದ್ದು,ಈತನಿಗೆ ಗಾಯವಾಗಿದ್ದು, ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಕೂಟರ್ ನಲ್ಲಿ ತಂದೆ ಮಗ ಸಂಚಾರ ಮಾಡುತ್ತಿರುವ ವೇಳೆ ಲಾರಿ ಡಿಕ್ಕಿಯಾಗಿದೆ ಎಂದು ಹೇಳಲಾಗಿದೆ. ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.