ಬಂಟ್ವಾಳ: ಬಿ.ಸಿ.ರೋಡ್ ನ ಬಸ್ ನಿಲ್ದಾಣದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಮಹಿಳೆಯ ಬ್ಯಾಗ್ ನಿಂದ 2 ಲಕ್ಷ ರೂ ಮೌಲ್ಯದ ಚಿನ್ನ ಕಳವಾಗಿದೆ. ಈ ಕುರಿತು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿ.ಸಿ.ರೋಡ್ ಬಸ್ ನಿಲ್ದಾಣ ಕಳೆದ ಕೆಲ ತಿಂಗಳುಗಳಿಂದ ಪಿಕ್ ಪಾಕೆಟ್ ಮಾಡುವವರ ಸ್ವರ್ಗವಾಗಿ ಪರಿಣಮಿಸಿದ್ದು, ಪೊಲೀಸರ ಕಣ್ತಪ್ಪಿಸಿ ತಮ್ಮ ಕೈಚಳಕ ತೋರುತ್ತಿರುವುದು ಪೊಲೀಸರಿಗೂ ಸವಾಲಾಗಿದೆ.
ಬೆಳ್ತಂಗಡಿ ತಾಲೂಕು ಕಲ್ಮಂಜ ನಿವಾಸಿ ಶಶಿಕಲಾ ಅವರು ಶಾಲೆಗೆ ರಜೆಯ ಹಿನ್ನೆಲೆಯಲ್ಲಿ ಮಗುವಿನ ಜೊತೆ ಗೋಳ್ತಮಜಲು ಗ್ರಾಮದ ನೆಟ್ಲದಲ್ಲಿರುವ ತಾಯಿ ಮನೆಗೆ ಬಂದಿದ್ದರು. ಇಂದು ಮತ್ತೆ ವಾಪಸು ಪತಿ ಜೊತೆ ಬೆಳ್ತಂಗಡಿಗೆ ತೆರಳುವ ಉದ್ದೇಶದಿಂದ ಬಿಸಿರೋಡಿಗೆ ಬಂದಿದ್ದು, ಬಸ್ ನಿಲ್ದಾಣದ ಸಮೀಪದ ಅಂಗಡಿಯೊಂದರಿಂದ ತಿನಿಸನ್ನು ಪಡೆದುಕೊಂಡು ಬೆಳ್ತಂಗಡಿಗೆ ಪ್ರಯಾಣಿಸುವುದಕ್ಕೆ ಬಸ್ ಹತ್ತುವ ವೇಳೆ ಬ್ಯಾಗ್ ನೊಳಗಿದ್ದ ಲಕ್ಷಾಂತರ ರೂ ಮೌಲ್ಯದ ಚಿನ್ನ ಕಳವಾಗಿದೆ.
ಮಗುವಿನ ಜೊತೆ ಗಂಡ ಬಸ್ ಹತ್ತಿದ್ದು, ಅವರ ಹಿಂದೆ ಶಶಿಕಲಾ ಅವರು ಬಸ್ ಹತ್ತುವ ಸಮಯದಲ್ಲಿ ಹಿಂಬದಿಯಿಂದ ಬ್ಯಾಗ್ ನೊಳಗಿದ್ದ ಚಿನ್ನದ ಪಾಕೆಟ್ ನ್ನು ಕಳವು ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಬಿ.ಸಿರೋಡ್ ಖಾಸಗಿ ಬಸ್ ನಿಲ್ದಾಣದ ಬಳಿ ಬೆಳ್ತಂಗಡಿ ಧರ್ಮಸ್ಥಳ ಕಡೆಗೆ ಹೋಗುವ ಬಸ್ಸಿಗಾಗಿ ಕಾಯುವ ಸಮಯ 10,30ರ ವೇಳೆ ಬ್ಯಾಗ್ ನಲ್ಲಿದ್ದ ಸುಮಾರು 45 ಗ್ರಾಂ ವಿವಿಧ ಶೈಲಿಯ ಮತ್ತು ವಿವಿಧ ಮಾದರಿಯ ಹಳೆಯ ಚಿನ್ನಾಭರಣಗಳು ಕಾಣೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…