ಬಂಟ್ವಾಳ ತಾಲೂಕು ಬಂಟರ ಸಂಘದ ವತಿಯಿಂದ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಸಮಗ್ರ ಪ್ರಶಸ್ತಿ ಮತ್ತು ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದ್ವಿತೀಯ ಸ್ಥಾನವನ್ನು ಪಡೆದ ಕಲ್ಲಡ್ಕ ವಲಯ ಬಂಟರ ಸಂಘದ ತಂಡದಲ್ಲಿ ಭಾಗವಹಿಸಿದ ಕ್ರೀಡಾಪಟುಗಳಿಗೆ ಮತ್ತು ಸ್ಪರ್ಧಿಗಳಿಗೆ ಅಭಿನಂದನಾ ಸಮಾರಂಭ ಕಲ್ಲಡ್ಕ ಪೂರ್ಲಿಪಾಡಿಯಲ್ಲಿ ನಡೆಯಿತು.
2023 24 ನೇ ಸಾಲಿನಲ್ಲಿ ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ ಕಾರ್ಯಕ್ರಮ ನಡೆಯಿತು.
ವಲಯ ಬಂಟರ ಸಂಘದ ಅಧ್ಯಕ್ಷರಾದ ಕೆ ಪದ್ಮನಾಭ ರೈ ಅಧ್ಯಕ್ಷತೆಯನ್ನು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ಪುಣೆ ಬಂಟರ ಸಂಘದ ಪದಾಧಿಕಾರಿಯಾದ ದಾಮೋದರ್ ಶೆಟ್ಟಿ ಸುಧೆಕ್ಕಾರು, ಬಂಟರ ತಾಲೂಕು ಬಂಟರ ಸಂಘದ ಜೊತೆ ಕೋಶಾಧಿಕಾರಿ ಪ್ರತಿಭಾ ಎ ರೈ, ತಾಲೂಕು ಬಂಟರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಬಾಲಕೃಷ್ಣ ಆಳ್ವ ನಾಗ್ತಿಮಾರು, ವಲಯ ಬಂಟರ ಸಂಘದ ಗೌರವಾಧ್ಯಕ್ಷರಾದ ದಿವಾಕರ್ ಶೆಟ್ಟಿ, ಕಾರ್ಯದರ್ಶಿ ಗಣೇಶ್ ಶೆಟ್ಟಿ ಗೊಳ್ತಮಜಲು, ಮಹಿಳಾ ವಿಭಾಗದ ಸಂಘದ ಅಧ್ಯಕ್ಷರಾದ ನೀನಾ ಉದಯ ರೈ, ಯುವ ವಿಭಾಗದ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಗ್ರಾಮ ಸಮಿತಿಯ ಅಧ್ಯಕ್ಷರುಗಳಾದ ಪ್ರೇಮನಾಥ್ ಶೆಟ್ಟಿ ಅಂತರ, ಸಂದೀಪ್ ಶೆಟ್ಟಿ ಅರೆಬೆಟ್ಟು, ಪ್ರಭಾಕರ ಶೆಟ್ಟಿ ಅಮ್ಟೂರು, ಐತಪ್ಪ ಶೆಟ್ಟಿ ದೇವಸ್ಯ ಉಪಸ್ಥಿತರಿದ್ದರು. ಪ್ರೇಮನಾಥ ಶೆಟ್ಟಿ ಅಂತರ ಸ್ವಾಗತಿಸಿ, ನಾಗೇಶ್ ಶೆಟ್ಟಿ ಬೊಂಡಾಲ ವಂದಿಸಿದರು.