Categories: Uncategorized

ಮಳೆ ಬಂದ್ರೆ, ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಒಳಗೆ ಕೂತ್ಕೊಳ್ಳಲೂ ಆಗ್ತಿಲ್ಲ, ಕಾರಣವೇನು?

ಕೆಎಸ್ಸಾರ್ಟಿಸಿ ಬಸ್ ನಿಲ್ದಾಣ

ಜಾಹೀರಾತು

ಬಿ.ಸಿ.ರೋಡ್ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಹೊರಗಿನಿಂದ ಸುಂದರವಾಗಿದೆ. ಒಳಗೆ ಪ್ರವೇಶಿಸಿ ಬಸ್ಸಿಗಾಗಿ ಕಾಯುವಾಗ ಮಳೆ ಬಂದರೆ ಅದರ ನಿಜರೂಪ ಗೊತ್ತಾಗುತ್ತದೆ ಎಂದು ಪ್ರಯಾಣಿಕರು ದೂರುತ್ತಿದ್ದಾರೆ. ಕಾರಣ ಇಷ್ಟೇ. ಬುಧವಾರ ದಿನವಿಡೀ ಸುರಿದ ಭಾರಿ ಮಳೆಗೆ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದಲ್ಲಿ ಕಟ್ಟಡದ ಎದುರು ಹಾಕಲಾದ ಶೀಟ್ ಗಳು ಸೋರುತ್ತಿದೆ. ಪ್ರಯಾಣಿಕರಿಗಾಗಿ ಹಾಕಲಾದ ಆಸನಗಳಲ್ಲಿ ಕುಳಿತುಕೊಳ್ಳುವುದು ಕಷ್ಟವಾಗುತ್ತಿದೆ. ಧಾರಾಕಾರವಾಗಿ ಮಳೆ ಸುರಿಯುತ್ತಿದ್ದರೆ, ಶೀಟ್ ನಿಂದ ಬೀಳುವ ನೀರು ಇನ್ನೂ ಹೆಚ್ಚಿನ ವೇಗದಲ್ಲಿ ಸುರಿಯುತ್ತಿದ್ದು, ಅದಕ್ಕೆ ಬಕೆಟ್ ಗಳನ್ನು ಇಡಲಾಗಿದೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts