ಪರಿಸರಕ್ಕೆ ವಿರುದ್ಧವಾಗಿ ಕೆಲಸ ಮಾಡಿದಾಗ ಪರಿಸರ ಆತನ ವಿರುದ್ಧವೇ ತಿರುಗಿ ಬೀಳುತ್ತದೆ ಆಗ ವಿಕೋಪಗಳು ಸಂಭವಿಸುತ್ತವೆ. ನಾವು ಪರಿಸರವನ್ನು ಪ್ರೀತಿಸಬೇಕು ಎಂದು ಬಂಟ್ವಾಳ ಉಪವಲಯ ಅರಣ್ಯಾಧಿಕಾರಿ ರವಿರಾಜ್ ಹೇಳಿದರು.
ಮಜಿ ವೀರಕಂಭದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನೆಟ್ಟು ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಅತಿಥಿಯಾಗಿ ಆಗಮಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಮಾತನಾಡಿ, ಪರಿಸರ ನಿಜವಾಗಿಯೂ ಎಲ್ಲ ಜೀವಿಗಳಿಗೂ ಆಶ್ರಯ ತಾಣ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಯೋಜನಾಧಿಕಾರಿ ಗಣೇಶ್ ಆಚಾರ್ಯ ಮಾತನಾಡಿ, ಪರಿಸರ ಜೊತೆ ಹೊಂದಾಣಿಕೆಯಿಂದ ಜೀವನ ಸಾಗಿಸಿದಾಗ ಎಲ್ಲವೂ ಸುಂದರವಾಗಿ ಕಂಗೊಳಿಸುತ್ತದೆ ಎಂದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಪತ್ರಕರ್ತ ಸಂದೀಪ್ ಸಾಲಿಯಾನ್ ಮಾತನಾಡಿ, ಶಾಲೆಯಲ್ಲಿ ತರಗತಿ ಕೋಣೆಗಳಲ್ಲಿ ಹಾಗೂ ಮನೆಯಲ್ಲಿ ಕಸವನ್ನು ಸರಿಯಾದ ರೀತಿಯಲ್ಲಿ ನಿರ್ವಹಣೆ ಮಾಡುವ ವಿಧಾನ ಹಾಗೂ ಹಸಿ ಕಸ ಒಣ ಕಸ ಅಪಾಯಕಾರಿ ಕಸ ಮುಂತಾಗಿ ವಿಲೇವಾರಿ ಮಾಡುವ ವಿಧಾನಗಳು ನಿರುಪಯುಕ್ತ ಎಂದು ಬಿಸಾಡಿದ ಹಲವಾರು ವಸ್ತುಗಳಿಂದ ಕಸದಿಂದ ರಸ ತಯಾರಿಸುವ ವಿಧಾನವನ್ನು ತಿಳಿಸಿದರು ಪರಿಸರಕ್ಕೆ ಬೇಡವಾದ ವಸ್ತುಗಳನ್ನು ಮನೆಯಲ್ಲಿ ಯಾವ ರೀತಿ ಅಲಂಕಾರಿಕ ವಸ್ತುಗಳನ್ನಾಗಿ ಬಳಸಬಹುದು ಎಂದು ಪ್ರದರ್ಶನದ ಮೂಲಕ ತಿಳಿಸಿದರು,
ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಕೊರಗಪ್ಪ ನಾಯ್ಕ್ ಮಾತನಾಡಿ, ಶಾಲೆಗಳಲ್ಲಿ ಪರಿಸರವನ್ನು ಪ್ರೀತಿಸುವಂಥ ಕಾರ್ಯಕ್ರಮ ನಡೆಯಬೇಕು ಎಂದರು.
2022 -23ನೇ ಸಾಲಿನಲ್ಲಿ ಶಾಲೆಯಲ್ಲಿ ನಡೆದ ಮನೆಗೊಂದು ಗಿಡ ಕಾರ್ಯಕ್ರಮದಲ್ಲಿ ಅರಣ್ಯ ಇಲಾಖೆಯಿಂದ ಶಾಲಾ ಪ್ರತಿ ಮಗುವಿಗೆ ನೀಡಿದ ಗಿಡಗಳನ್ನು ಇದುವರೆಗೂ ಬೆಳೆಸಿ ಕಾಪಾಡಿದ ಮಕ್ಕಳನ್ನು ಗುರುತಿಸಿ ಬಹುಮಾನ ನೀಡಿ ಅಭಿನಂದಿಸಲಾಯಿತು.. ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಪರಿಸರ ದಿನಾಚರಣೆ ಕುರಿತು ತರಗತಿ ವಾರು ಪರಿಸರಕ್ಕೆ ಸಂಬಂಧಪಟ್ಟ ವಿವಿಧ ಸ್ಪರ್ಧೆಗಳನ್ನು ನಡೆಸಿ ವಿಜೇತರಿಗೆ ಬಹುಮಾನ ಹಂಚಲಾಯಿತು.
ಜನಜಾಗೃತಿ ವೇದಿಕೆಯ ಮೇಲ್ವಿಚಾರಕರಾದ ನಿತೇಶ್ ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಶೌರ್ಯ ವಿಪತ್ತು ನಿರ್ವಹಣಾ ಘಟಕ ಕಲ್ಲಡ್ಕ ಅಧ್ಯಕ್ಷ ಮಾಧವ ಸಾಲಿಯಾನ್ ಕುದ್ರೆಬೆಟ್ಟು, ಯೋಜನೆಯ ಕಲ್ಲಡ್ಕ ವಲಯದ ಅಧ್ಯಕ್ಷ ತುಳಸಿ, ಉಪಸ್ಥಿತರಿದ್ದರು ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ಸ್ವಾಗತಿಸಿದರು, ಗ್ರಾಮಾಭಿವೃದ್ಧಿ ಯೋಜನೆಯ ಕಲ್ಲಡ್ಕ ವಲಯ ಮೇಲ್ವಿಚಾರಕರಾದ ಸುಗುಣ ಶೆಟ್ಟಿವಂದಿಸಿದರು, ಶಿಕ್ಷಕಿ ಸಂಗೀತ ಶರ್ಮ ಪಿ ಜಿ ಕಾರ್ಯಕ್ರಮ ನಿರೂಪಿಸಿದರು.