Categories: Uncategorized

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ: ನಿವೃತ್ತ ಸಿಇಒಗೆ ಬೀಳ್ಕೊಡುಗೆ

ಕಲ್ಲಡ್ಕ ರೈತರ ಸೇವಾ ಸಹಕಾರಿ ಸಂಘ ಮತ್ತು ಪಾಣೆಮಂಗಳೂರು ಸಹಕಾರಿ ಸಂಘದಲ್ಲಿ 36 ವರ್ಷಗಳ ಕಾಲ ಕರ್ತವ್ಯ ಸಲ್ಲಿಸಿ 10 ವರ್ಷಗಳ ಕಾಲ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಜವಾಬ್ದಾರಿ ನಿರ್ವಹಿಸಿ ವಯೋನಿವೃತ್ತಿ ಹೊಂದಿರುವ ಸುರೇಶ್ ಕೆ ಅವರಿಗೆ ಬೀಳ್ಕೊಡುಗೆ ಹಾಗೂ ಬಂಟ್ವಾಳ ತಾಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಪ್ರತಿನಿಧಿಯಾಗಿ ಪ್ರತಿಷ್ಠಿತ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಗೆ ಸತತ ಆರನೇ ಬಾರಿಗೆ ನಿರ್ದೇಶಕರಾಗಿ ಆಯ್ಕೆಯಾದ ಟಿ.ಜಿ. ರಾಜಾರಾಮ್ ಭಟ್ ಅವರಿಗೆ ಅಭಿನಂದನಾ ಸಮಾರಂಭ ಮುಖ್ಯ ಕಾರ್ಯನಿರ್ವಣಾಧಿಕಾರಿಗಳ ಒಕ್ಕೂಟದ ವತಿಯಿಂದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಬಿಸಿರೋಡು ಶಾಖೆಯ ಸಭಾಂಗಣದಲ್ಲಿ ನಡೆಯಿತು.

ಜಾಹೀರಾತು

ಅಧ್ಯಕ್ಷತೆಯನ್ನು ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಟಿ. ಜಿ. ರಾಜಾರಾಮ್ ಭಟ್ ವಹಿಸಿದ್ದರು.ಈ ಸಂದರ್ಭ ಮಾತನಾಡಿದ ಅವರು ಕಷ್ಟಕರ ಪರಿಸ್ಥಿತಿಯಲ್ಲಿ ಸಂಘವನ್ನು ಮುನ್ನೆಡೆಸಿದ ಕೀರ್ತಿ ಸಿಬಂದಿಗೆ ಸಲ್ಲುತ್ತದೆ. ಸಹಕಾರದಿಂದ ಕೆಲಸ ಮಾಡಿದಾಗ ಮಾತ್ರ ಸಹಕಾರಿ ಸಂಘಗಳು ಎತ್ತರಕ್ಕೆ ಬೆಳೆಯುತ್ತದೆ ಎಂದರು. ದ.ಕ ಸಹಕಾರಿ ಸಂಘಗಳ ಉಪನಿಬಂಧಕ ರಮೇಶ್ ಎಚ್ಎನ್ ಶುಭ ಹಾರೈಸಿದರು. ಸಹಕಾರ ಅಭಿವೃದ್ಧಿ ಅಧಿಕಾರಿ ಗೋಪಾಲ ಎನ್.ಜೆ, ಡಿಸಿಸಿ ಬ್ಯಾಂಕ್ ಉಪ ಮಹಾಪ್ರಬಂಧಕಿ ಶರ್ಮಿಳಾ ಭಟ್, ಡಿಸಿಸಿ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಗಣೇಶ್ ಕಾರಂತ, ವಲಯ ಮೇಲ್ವಿಚಾರಕರುಗಳಾದ ಯೋಗೀಶ್ ಎಚ್, ಕೀರ್ತಿರಾಜ್ ಹಾಗೂ ತಾಲೂಕಿನ ಸಹಕಾರಿ ಸಂಘಗಳ ಮುಖ್ಯ ‌ಕಾರ್ಯನಿರ್ವಣಾಧಿಕಾರಿಗಳು ಉಪಸ್ಥಿತರಿದ್ದರು. ಒಕ್ಕೂಟದ ಅಧ್ಯಕ್ಷ ಸುಧಾಕರ ಶೆಟ್ಟಿ ಸ್ವಾಗತಿಸಿ, ಒಕ್ಕೂಟದ ಉಪಾಧ್ಯಕ್ಷ ಅಲ್ಬೆರ್ಟ್ ಡಿ.ಸೋಜ ವಂದಿಸಿದರು. ಕಾರ್ಯದರ್ಶಿ ಈಶ್ವರ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು.

 

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಬಿ.ವಿ.ಕಾರಂತ ಹುಟ್ಟಿದ ತಾಲೂಕಲ್ಲಿ ಸುಸಜ್ಜಿತ ರಂಗಮಂದಿರವೇ ಇಲ್ಲ

| ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲು ಪರದಾಟ | ತಾಲೂಕು ಕೇಂದ್ರದಲ್ಲಿ ಜಾಗವೇ ದೊರಕಿಲ್ಲ (more…)

53 minutes ago