ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಉರಗತಜ್ಞ ಸ್ನೇಕ್ ಕಿರಣ್ ಅವರಿಂದ ಉರಗ ಸಂರಕ್ಷಣೆ ಹಾಗೂ ಪರಿಸರದ ಉಳಿವಿನ ಕುರಿತ ಮಾಹಿತಿ ಕಾರ್ಯಕ್ರಮ ನಡೆಯಿತು.
ಪ್ರಾಥಮಿಕ ಶಾಲೆ ಹಾಗೂ ಬಿ.ಮೂಡ ಸರಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ ಫೊಟೋ ಪ್ರದರ್ಶನದ ಮೂಲಕ ನಾನಾ ಜಾತಿಯ ಹಾವುಗಳು ಹಾಗೂ ಅವುಗಳ ಸ್ವಭಾವ ಹಾಗೂ ಪರಿಸರದಲ್ಲಿ ಕಂಡುಬರುವ ಜೈವಿಕ ಸಮತೋಲನದ ಕುರಿತು ಮಾಹಿತಿ ನೀಡಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಅವರು ಸಂವಾದ ನಡೆಸಿದರು. ಬಳಿಕ ಹಳೆ ವಿದ್ಯಾರ್ಥಿ, ಪತ್ರಕರ್ತ ಸಂದೀಪ್ ಸಾಲ್ಯಾನ್ ಅವರು ಗಿಡ ನೆಡುವ ಮೂಲಕ ಪರಿಸರ ದಿನಾಚರಣೆಯ ಮಹತ್ವವನ್ನು ಸಾರಿದರು. ಈ ಸಂದರ್ಭ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ ಮಾಂಬಾಡಿ, ಶಾಲಾ ಮುಖ್ಯೋಪಾಧ್ಯಾಯಿನಿ ಲಕ್ಷ್ಮೀ ಕೆ, ಹೈಸ್ಕೂಲ್ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕವೃಂದ ಉಪಸ್ಥಿತರಿದ್ದರು. ಶಿಕ್ಷಕರಾದ ಸುಶೀಲಾ ಲಿಂಗಪ್ಪ, ಹೇಮಾವತಿ, ಪೂರ್ಣಿಮಾ, ಲಾವಣ್ಯ, ನಿಶ್ಮಿತಾ, ಶಿವಮೂರ್ತಿ ಸಹಕರಿಸಿದರು.