ಸಜೀಪಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ಮಾಹಿತಿ ಕಾರ್ಯಕ್ರಮ ಹಾಗೂ ಗಿಡ ವಿತರಣೆ ಪಾಣೆಮಂಗಳೂರು ವಲಯದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ನಡೆಯಿತು.
ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶೋಭಾ ಶೆಟ್ಟಿ ಹಾಗೂ ಜನಜಾಗೃತಿ ವಲಯ ಅಧ್ಯಕ್ಷರಾದ ಶ್ರೀನಿವಾಸ್ ಪೂಜಾರಿ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಬಾಲಕೃಷ್ಣ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ದೇವಿಪ್ರಸಾದ್ ಪೂಂಜಾ, ಹಾಗೂ ಒಕ್ಕೂಟದ ಅಧ್ಯಕ್ಷರಾದ ಹರಿಣಾಕ್ಷಿ, ಶಾಲೆಯ ಮುಖ್ಯೋಪಾಧ್ಯಾಯರಾದ ವತ್ಸಲ ಉಪಸ್ಥಿತರಿದ್ದರು. ಪರಿಸರ ಸಂರಕ್ಷಣೆಯ ಮಹತ್ವ ಹಾಗೂ ನಾಶದಿಂದ ಉಂಟಾಗುವ ದುಷ್ಪರಿಣಾಮದ ಕುರಿತು ಮಾಹಿತಿ ನೀಡಲಾಯಿತು, ಮತ್ತು ಶಾಲಾ ಆವರಣದಲ್ಲಿ ಹಣ್ಣಿನ ಗಿಡ ನಾಟಿ ಮಾಡಿಸಿ, ವಿದ್ಯಾರ್ಥಿಗಳಿಗೆ ಪರಿಸರಕ್ಕೆ ಸಂಬಂಧಪಟ್ಟ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ನೀಡಲಾಯಿತು. ಸದಸ್ಯರಿಗೆ ಕಾಡುತ್ಪತ್ತಿ ಗಿಡಗಳನ್ನು ವಿತರಣೆ ಮಾಡಲಾಯಿತು. ವಲಯದ ಮೇಲ್ವಿಚಾರಕಿ ಅಮಿತ ಕಾರ್ಯಕ್ರಮ ನಿರೂಪಣೆ ಮಾಡಿದರು. ವಿಭಾಗದ ಸೇವಾಪ್ರತಿನಿಧಿ ಬಬಿತ ಸ್ವಾಗತ ಮಾಡಿದರು ಶಾಲಾ ಶಿಕ್ಷಕಿ ಜೆಸಿಂತಾ ಮೋರಸ್ ವಂದಿಸಿದರು.