ಬಂಟ್ವಾಳ

ಗ್ರಾಪಂ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು, ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆ

ಬಂಟ್ವಾಳ ತಾಲೂಕು ಪಂಚಾಯಿತಿ ಎಸ್. ಜಿ. ಎಸ್. ವೈ ಸಭಾಂಗಣದಲ್ಲಿ ಬಂಟ್ವಾಳ ಮತ್ತು ಉಳ್ಳಾಲ ತಾಲೂಕಿನ  ಗ್ರಾಮ ಪಂಚಾಯತ್ ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು.

ಬಂಟ್ವಾಳದ 51 ಗ್ರಾಮ ಪಂಚಾಯತ್, ಉಳ್ಳಾಲದ 7 ಒಕ್ಕೂಟದ ಮುಖ್ಯ ಪುಸ್ತಕ ಬರಹಗಾರರು ಮತ್ತು ಸ್ಥಳೀಯ ಸಮುದಾಯ ಸಂಪನ್ಮೂಲ ವ್ಯಕ್ತಿಗಳು ಆಗಮಿಸಿದ್ದರು.

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನ ಯೋಜನಾ ನಿರ್ದೇಶಕ ಕೆ. ಇ ಜಯರಾಮ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ವಿಶ್ವನಾಥ್ ಬೈಲಾಮೂಲೆ ಮಾತನಾಡಿ, ಪಂಚಾಯತ್ ಮಟ್ಟದಲ್ಲಿ ತ್ಯಾಜ್ಯ ವಿಲೇವಾರಿ ಜವಾಬ್ದಾರಿ ಒಕ್ಕೂಟದಾಗಿದ್ದು, ಒಕ್ಕೂಟ ಹಾಗೂ ಪಂಚಾಯತ್ ನಡುವೆ ಈಗಾಗಲೇ ಒಪ್ಪಂದವಾಗಿದ್ದು,ಎಲ್ಲಾ ಪಂಚಾಯತ್ ಗಳಲ್ಲೂ  ಸರಕಾರದ ಆದೇಶದಂತೆ ಒಕ್ಕೂಟದ ಸಿಬ್ಬಂದಿಗಳೇ ತ್ಯಾಜ್ಯ ವಿಲೇವಾರಿಯ ಕಾರ್ಯ ನಿರ್ವಹಿಸಬೇಕು. ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಗಳನ್ನು ಪಂಚಾಯತ್ ವತಿಯಿಂದ ಒದಗಿಸಲಾಗುವುದು. ಉದ್ಯೋಗ ಖಾತರಿ ಯೋಜನೆಯ ಒಗ್ಗೂಡಿಸುವಿಕೆಯೊಂದಿಗೆ ಪ್ರತಿಯೊಂದು ಪಂಚಾಯತ್ ವ್ಯಾಪ್ತಿಯಲ್ಲಿ ತಲಾ 75 ಕೃಷಿ ಪೌಷ್ಟಿಕ ತೋಟ ರಚನೆ ಮಾಡಬೇಕಿದ್ದು, ಒಕ್ಕೂಟದ ಮೂಲಕ ಫಲಾನುಭವಿಗಳ ಆಯ್ಕೆ ಮಾಡಬೇಕೆಂದು ತಿಳಿಸಿದರು.

ಉದ್ಯೋಗ ಖಾತರಿ ಯೋಜನೆಯ ಬಂಟ್ವಾಳ ತಾಲೂಕು ಐ ಇ ಸಿ ಸಂಯೋಜಕ ರಾಜೇಶ್ ಮಾತನಾಡಿ, ಕೃಷಿ ಪೌಷ್ಟಿಕ ತೋಟ ರಚನೆಯ ತಾಂತ್ರಿಕ ವಿಷಯದ ಬಗ್ಗೆ ಮಾಹಿತಿ ನೀಡಿದರು.

ಸಂಜೀವಿನಿ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಸಭೆಯಲ್ಲಿ ಉಪಸ್ಥಿತರಿದ್ದು, ಲೋಕೋಸ್ ನ ಪ್ರಗತಿ, ಸಮುದಾಯ ಬಂಡವಾಳ ನಿಧಿ ವಿತರಣೆ, ಕೃಷಿ ಮತ್ತು ಕೃಷಿಯೇತರ ಜೀವನೋಪಾಯ ಚಟುವಟಿಕೆ, ಕೃಷಿಯೇತರ ಚಟುವಟಿಕೆ ಪ್ರಮಾಣ ಪತ್ರ, ಬ್ಯಾಂಕ್ ಸಂಪರ್ಕ, ಸಾಮಾಜಿಕ ವಿಮೆ, ಗುಂಪು ಉದ್ಯಮ, ಉತ್ಪಾದಕರ ಗುಂಪು, ಲೆಕ್ಕ ಪರಿಶೋಧನೆ, 2024-25 ನೇ ಸಾಲಿನ ವಾರ್ಷಿಕ ಕ್ರಿಯಾ ಯೋಜನೆ ಹಾಗೂ ಇನ್ನಿತರ ವಿಷಯಗಳ ಬಗ್ಗೆ ಪ್ರಗತಿ ಪರಿಶೀಲನೆ ನಡೆಸಿ ಮಾರ್ಗದರ್ಶನ ನೀಡಿದರು.

ತಾಲೂಕು ಪಂಚಾಯತ್ ವ್ಯವಸ್ಥಾಪಕರಾದ ಪ್ರಕಾಶ್, ಸಂಜೀವಿನಿ ಜಿಲ್ಲಾ ವ್ಯವಸ್ಥಾಪಕಿ ವಾಣಿಶ್ರೀ,ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಸುಧಾ, ವಲಯ ಮೇಲ್ವಿಚಾರಕರಾದ ಕುಶಾಲಪ್ಪ ಗೌಡ, ಪ್ರೀತಿಕಾ ಉಪಸ್ಥಿತರಿದ್ದರು. ಸಂಜೀವಿನಿ ಬಂಟ್ವಾಳ ತಾಲೂಕು ವ್ಯವಸ್ಥಾಪಕರಾದ ಪ್ರದೀಪ್ ಕಾಮತ್ ಸ್ವಾಗತಿಸಿದರು. ವಲಯ ಮೇಲ್ವಿಚಾರಕಿ ಕುಸುಮ ವಂದಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.