ಮಧ್ಯವ್ಯಸನ ಬಿಟ್ಟು ಹೊಸ ಜೀವನ ಕಟ್ಟಿಕೊಳ್ಳಿ, ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಎಂದು ಇಡಿಯಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಖ್ಯ ಅರ್ಚಕರಾದ ಕೃಷ್ಣರಾಜ್ ಪುಣಿ೦ಚಿತ್ತಾಯ ಶುಭ ಹಾರೈಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ)ನ ಮಂಜೇಶ್ವರ ತಾಲ್ಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ) ಬೆಳ್ತಂಗಡಿ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ (ರಿ ) ಮಂಜೇಶ್ವರ ತಾಲೂಕು, ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಬೆಂಗಳೂರು, ಮದ್ಯವರ್ಜನ ಶಿಬಿರದ ವ್ಯವಸ್ಥಾಪನ ಸಮಿತಿ ಮಂಜೇಶ್ವರ, ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪೆರ್ಲ, ನವಜೀವನ ಸಮಿತಿಗಳು ಮಂಜೇಶ್ವರ ತಾಲೂಕು, ಸ್ಥಳೀಯ ಸಂಘ ಸಂಸ್ಥೆ ಹಾಗೂ ದಾನಿಗಳ ಸಹಕಾರದೊಂದಿಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನ ಮುಕ್ತ ಮತ್ತು ಸಂಶೋಧನಾ ಕೇಂದ್ರ ಲಾಯಿಲಾ ಬೆಳ್ತಂಗಡಿಯ ವಿಸ್ತರಣಾ ಕಾರ್ಯಕ್ರಮದ ಅಂಗವಾಗಿ ಜರಗುವ 1801 ನೇ ಮದ್ಯವರ್ಜನ ಶಿಬಿರವನ್ನು ಶ್ರೀ ದುರ್ಗಾಪರಮೇಶ್ವರಿ ( ಉಳ್ಳಾಲ್ತಿ ) ದೇವಸ್ಥಾನ ಇಡಿಯಡ್ಕದಲ್ಲಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆ ಮಂಜೇಶ್ವರ ಅಧ್ಯಕ್ಷರಾದ ಡಾ ಜಯಪ್ರಕಾಶ್ ನಾರಾಯಣ ತೊಟ್ಟಿತ್ತೋಡಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಜನಜಾಗೃತಿ ವೇದಿಕೆ ಸ್ಥಾಪಕಾಧ್ಯಕ್ಷ ಗೋಪಾಲ ಶೆಟ್ಟಿ ಅರಿಬೈಲ್, ಯೋಜನಾಧಿಕಾರಿ ಶಶಿಕಲಾ ಸುವರ್ಣ, ಶಂಕರ್ ನಾರಾಯಣ ಖಂಡಿಗೆ, ಉದಯಕುಮಾರ್ ಆನೆಬಾಗಿಲು, ಕೆ ಇಂದಿರಾ, ವಲಯಾಧ್ಯಕ್ಷರುಗಳಾದ ಶ್ರೀಧರ ಮಣಿಯಾಣಿ, ಬಿ ಪಿ ಶೇಣಿ ಪ್ರಮುಖರಾದ ಶ್ರೀಧರ್ ನಾಯಕ್, ಸುರೇಂದ್ರ ನಾಯಕ್ ಮಾಸ್ಟರ್ ಶೌರ್ಯ, ಶಿಬಿರಾಧಿಕಾರಿ ದೇವಿ ಪ್ರಸಾದ್ ಸುವರ್ಣ , ನೇತ್ರಾವತಿ ಆರೋಗ್ಯ ಕಾರ್ಯಕರ್ತೆ ,ಎಲ್ಲಾ ಒಕ್ಕೂಟದ ಅಧ್ಯಕ್ಷರು ಪದಾಧಿಕಾರಿಗಳು,ಎಲ್ಲಾ ನವಜೀವನ ಸಮಿತಿಯ ಸದಸ್ಯರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಜನಜಾಗೃತಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ಮಾತನಾಡಿದರು. ಪೆರ್ಲ ಮೇಲ್ವಿಚಾರಕಿ ಜಯಶ್ರೀ ಸ್ವಾಗತಿಸಿ, ಕುಂಬ್ಳೆ ವಲಯ ಮೇಲ್ವಿಚಾರಕ ರಮೇಶ್ ವಂದಿಸಿದರು.ಮೇಲ್ವಿಚಾರಕ ಭಾಸ್ಕರ್ ಕಾರ್ಯಕ್ರಮ ನಿರೂಪಿಸಿದರು.
Be the first to comment on "ಇಡಿಯಡ್ಕದಲ್ಲಿ 1801ನೇ ಮದ್ಯವರ್ಜನ ಶಿಬಿರ"