ಶ್ರೀ ವಿಷ್ಣುನಾಮ ವ್ಯಾಖ್ಯಾನ – ಪುಸ್ತಕ ಲೋಕಾರ್ಪಣೆ

ಬಂಟ್ವಾಳ: ಬಿ.ಸಿ.ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಮೊಡಂಕಾಪು ಅಡ್ಕತಿಮಾರು ಪ್ರಕಾಶನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಸಹಯೋಗದಲ್ಲಿ ನಿವೃತ್ತ ಶಿಕ್ಷಕ ಅಡ್ಕತಿಮಾರು ರಾಮಚಂದ್ರ ಭಟ್ಟರ ಕೃತಿ ಶ್ರೀ ವಿಷ್ಣುನಾಮ ವ್ಯಾಖ್ಯಾನ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.

Sunnambala Vishveshwara Bhatt released the book

ಪುಸ್ತಕ ಲೋಕಾರ್ಪಣೆ ಮಾಡಿ, ವಿಷ್ಣುತತ್ವ ಹಾಗೂ ಕೃತಿಯ ಕುರಿತು ಮಾತನಾಡಿದ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್, ಕೃತಿಯ ಪರಿಚಯ ಮಾಡಿ ಅದರ ಒಳನೋಟದ ಮಾಹಿತಿ ನೀಡಿದರು. ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಿನಾಯಕ ಶಂಕರಲಿಂಗ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಶುಭ ಹಾರೈಸಿದರು. ಕೃತಿಕಾರ ಅಡ್ಕತಿಮಾರು ರಾಮಚಂದ್ರ ಭಟ್ಟ ಉಪಸ್ಥಿತರಿದ್ದರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.  ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ಗರ ಹೆಬ್ಬಾರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಶ್ರೀ ವಿಷ್ಣುನಾಮ ವ್ಯಾಖ್ಯಾನ – ಪುಸ್ತಕ ಲೋಕಾರ್ಪಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*