ಬಂಟ್ವಾಳ: ಬಿ.ಸಿ.ರೋಡ್ ನ ಕೈಕುಂಜೆಯಲ್ಲಿರುವ ಕನ್ನಡ ಭವನದಲ್ಲಿ ಮೊಡಂಕಾಪು ಅಡ್ಕತಿಮಾರು ಪ್ರಕಾಶನ ವತಿಯಿಂದ ಕನ್ನಡ ಸಾಹಿತ್ಯ ಪರಿಷತ್ತಿನ ಬಂಟ್ವಾಳ ತಾಲೂಕು ಘಟಕ ಸಹಯೋಗದಲ್ಲಿ ನಿವೃತ್ತ ಶಿಕ್ಷಕ ಅಡ್ಕತಿಮಾರು ರಾಮಚಂದ್ರ ಭಟ್ಟರ ಕೃತಿ ಶ್ರೀ ವಿಷ್ಣುನಾಮ ವ್ಯಾಖ್ಯಾನ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು.
ಪುಸ್ತಕ ಲೋಕಾರ್ಪಣೆ ಮಾಡಿ, ವಿಷ್ಣುತತ್ವ ಹಾಗೂ ಕೃತಿಯ ಕುರಿತು ಮಾತನಾಡಿದ ಪ್ರಸಿದ್ಧ ಯಕ್ಷಗಾನ ಕಲಾವಿದ ಸುಣ್ಣಂಬಳ ವಿಶ್ವೇಶ್ವರ ಭಟ್, ಕೃತಿಯ ಪರಿಚಯ ಮಾಡಿ ಅದರ ಒಳನೋಟದ ಮಾಹಿತಿ ನೀಡಿದರು. ವಿಶ್ರಾಂತ ಪ್ರಾಧ್ಯಾಪಕ ಪ್ರೊ.ವಿನಾಯಕ ಶಂಕರಲಿಂಗ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕನ್ನಡ ಸಾಹಿತ್ಯ ಪರಿಷತ್ ಬಂಟ್ವಾಳ ತಾಲೂಕು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಶುಭ ಹಾರೈಸಿದರು. ಕೃತಿಕಾರ ಅಡ್ಕತಿಮಾರು ರಾಮಚಂದ್ರ ಭಟ್ಟ ಉಪಸ್ಥಿತರಿದ್ದರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಡಾ.ಅಜಕ್ಕಳ ಗಿರೀಶ ಭಟ್ಟ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿವೃತ್ತ ಮುಖ್ಯೋಪಾಧ್ಯಾಯ ಮಹಾಬಲೇಶ್ಗರ ಹೆಬ್ಬಾರ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.