ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟುವಿನಲ್ಲಿರುವ ಬಿ.ಮೂಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಿಯ ವಿದ್ಯಾರ್ಥಿಗಳಾದ ಜಯಂತ್ ಅಗ್ರಬೈಲ್ ಬಿ.ಸಿ.ರೋಡ್, ಯತೀಶ್ ಕೈಕುಂಜೆ ಬೆಂಗಳೂರು, ಚರಣ್ ಕೈಕುಂಜೆ ಕುವೈಟ್ ಮತ್ತು ಸಂದೀಪ್ ಮಠ ದುಬೈ ಅವರು ಒದಗಿಸಿದ ನೋಟ್ ಬುಕ್ ಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ವಿತರಿಸಲಾಯಿತು.
ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿದ್ದ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಹರೀಶ್ ಮಾಂಬಾಡಿ ಮಾತನಾಡಿ, ಮಕ್ಕಳು ದಾನಿಗಳು ನೀಡಿದ ಉಚಿತ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು, ಈ ವರ್ಷದಿಂದ ಒಂದನೇ ತರಗತಿಯಿಂದಲೇ ಮಕ್ಕಳಿಗೆ ಉಚಿತವಾಗಿ ಕಂಪ್ಯೂಟರ್ ಕಲಿಕೆಯನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ದಾನಿಗಳಾದ ಹಿರಿಯ ವಿದ್ಯಾರ್ಥಿ ಜಯಂತ್ ಅಗ್ರಬೈಲ್ ಪುಸ್ತಕ ವಿತರಿಸಿ ಮಾತನಾಡಿ, ಮಕ್ಕಳು ಶಾಲೆಯ ಮೇಲೆ ಅಭಿಮಾನವಿಟ್ಟುಕೊಂಡು, ನಿರಂತರವಾಗಿ ಸಂಪರ್ಕದಲ್ಲಿರಬೇಕು ಎಂದರು.ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಗಣೇಶ್ ಕಾಮಾಜೆ ಮಾತನಾಡಿ, ಶಾಲೆಯ ಜೊತೆ ಹಿರಿಯ ವಿದ್ಯಾರ್ಥಿಗಳ ಬೆಂಬಲ ಸದಾ ಇರುತ್ತದೆ ಎಂದು ಶುಭ ಹಾರೈಸಿದರು.ಹಿರಿಯ ವಿದ್ಯಾರ್ಥಿ, ಪತ್ರಕರ್ತ ಸಂದೀಪ್ ಸಾಲ್ಯಾನ್ ಮಾತನಾಡಿ, ಮಕ್ಕಳು ಸದಾ ಚಟುವಟಿಕೆಗಳಿಂದ ಕ್ರಿಯಾಶೀಲರಾಗಿರಬೇಕು ಎಂದು ಕರೆ ನೀಡಿದರು.
ಈ ಸಂದರ್ಭ ಹಿರಿಯ ವಿದ್ಯಾರ್ಥಿ ಹಾಗೂ ಎಸ್.ಡಿ.ಎಂ.ಸಿ. ಸದಸ್ಯ ದೇವದಾಸ್ ಅಗ್ರಬೈಲ್ ಪುಸ್ತಕ ವಿತರಿಸಿ ಶುಭ ಹಾರೈಸಿದರು. ಜಯಂತ್ ಅಗ್ರಬೈಲ್ ಅವರ ಪತ್ನಿ ಲಾವಣ್ಯ ಮತ್ತು ಯತೀಶ್ ಕೈಕುಂಜೆ ಅವರ ಪತ್ನಿ ಪ್ರಿಯಾಂಕಾ, ಎಸ್.ಡಿ.ಎಂ.ಸಿ.ಸದಸ್ಯೆ ವಿನೋದ, ಮಜಿ ವೀರಕಂಭ ಶಾಲಾಭಿವೃದ್ಧಿಗೆ ಶ್ರಮಿಸುತ್ತಿರುವ ಚಿನ್ನ ಮೈರ, ಶಾಲಾ ಮುಖ್ಯ ಶಿಕ್ಷಕಿ ಲಕ್ಷ್ಮೀ ಕೆ ಉಪಸ್ಥಿತರಿದ್ದರು. ಹಿರಿಯ ಸಹಶಿಕ್ಷಕಿ ತಾಹಿರಾ ವಂದಿಸಿದರು. ಸಹಶಿಕ್ಷಕಿ ಹೇಮಾವತಿ ಕಾರ್ಯಕ್ರಮ ನಿರೂಪಿಸಿದರು. ಹಿರಿಯ ಸಹಶಿಕ್ಷಕಿ ಸುಶೀಲಾ ಲಿಂಗಪ್ಪ, ಶಿಕ್ಷಕಿಯರಾದ ನಿಶ್ಮಿತಾ, ಪೂರ್ಣಿಮಾ, ಲಾವಣ್ಯ, ದಿವ್ಯಾ ಕಂಪ್ಯೂಟರ್ ಶಿಕ್ಷಕ ಶಿವಮೂರ್ತಿ ಹಾಜರಿದ್ದರು.
Be the first to comment on "ಬಿ.ಮೂಡ ಸರಕಾರಿ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ"