ಕಲ್ಲಡ್ಕ

ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಮಾತ್ರ ಶಾಲೆಗಳು ಅಭಿವೃದ್ಧಿ: ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ

ಪೋಷಕರ ಒಡನಾಟ, ಕುಟುಂಬ ರೂಪದ ಪ್ರೀತಿ ಬಾಂಧವ್ಯ ಮಮತೆ ಇದ್ದರೆ ಶಾಲೆಗಳು ಯಾವ ರೀತಿ ಅಭಿವೃದ್ಧಿ ಹೊಂದುತ್ತವೆ ಎಂಬುದಕ್ಕೆ ಏಮಾಜೆ ಶಾಲೆ ಮಾದರಿಯಾಗಿದೆ ಎಂದು ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ ಜಿ ಹೇಳಿದರು. 

ಜಾಹೀರಾತು

ಬಂಟ್ವಾಳ ತಾಲೂಕು ನೆಟ್ಲ ಮೂಡ್ನೂರು ಗ್ರಾಮದ ಏಮಾಜೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ ನೂತನವಾಗಿ ಪ್ರಾರಂಭವಾದ ಪೂರ್ವ ಪ್ರಾಥಮಿಕ ( ಎಲ್ ಕೆ ಜಿ ಮತ್ತು ಯು ಕೆ ಜಿ )ತರಗತಿಯನ್ನು ಉದ್ಘಾಟಿಸಿ, ಶಾಲೆಯಲ್ಲಿ ಅಕ್ಷರ ದಾಸೋಹಕ್ಕೆ ಸಂಬಂಧಪಟ್ಟ ಅಕ್ಷಯಪಾತ್ರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

2024-2025 ನೇ ಸಾಲಿನ ಶಾಲಾ ಮಂತ್ರಿಮಂಡಲಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಅಧಿಕಾರ ಹಸ್ತಾಂತರಿಸಿ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭ ವೇದಿಕೆಯಲ್ಲಿದ್ದ ಗಣ್ಯರು ದಾನಿಗಳು ಕೊಡುಗೆಯಾಗಿ ನೀಡಿದ ಶಾಲಾ ಎಲ್ಲ ಮಕ್ಕಳಿಗೆ ಬರೆಯುವ ಪುಸ್ತಕ, ಶಾಲಾ ಸಮವಸ್ತ್ರ, ಬೆಲ್ಟ್, ಟೈ, ಗುರುತಿನ ಕಾರ್ಡು ಮೊದಲಾದವುಗಳನ್ನು ವಿತರಿಸಿದರು.

ಬೆಳಿಗ್ಗೆ ಹತ್ತನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಶಾಲೆಯಲ್ಲಿ ಯೋಗ ದಿನ ಆಚರಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಟ್ಲ ತಾಲೂಕು ಯೋಜನಾಧಿಕಾರಿ ರಮೇಶ್ ಶಾಲಾ ಆವರಣದಲ್ಲಿ ಗಿಡವನ್ನು ನೆಡುವುದರ ಮೂಲಕ ವಿಶ್ವ ಪರಿಸರ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭ ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಲ್ಲಿಕಾ, ಉಪಾಧ್ಯಕ್ಷರಾದ ಪ್ರಸಾದ್ ಆಚಾರ್ಯ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಮಿತ ಡಿ ಪೂಜಾರಿ, ಸದಸ್ಯರಾದ ಧನಂಜಯ ಗೌಡ, ಶಾಲಾ ಗೌರವಾಧ್ಯಕ್ಷರಾದ ಜಯರಾಮ್ ರೈ, ನಿವೃತ್ತ ಪ್ರಾಂಶುಪಾಲರಾದ ಪ್ರೇಮಲತಾ ರೈ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಮುರಳೀಧರ ಶೆಟ್ಟಿ, ಮಕ್ಕಳ ಪೋಷಕರು,ವಿದ್ಯಾಭಿಮಾನಿಗಳು, ವಿದ್ಯಾರ್ಥಿಗಳು,ಶಿಕ್ಷಕರು, ಅಕ್ಷರದಾಸೋಹ ಸಿಬ್ಬಂದಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಡಾ ತ್ರಿವೇಣಿ ರಮೇಶ್ ಸ್ವಾಗತಿಸಿ, , ಸಹ ಶಿಕ್ಷಕ ಉದಯ ಚಂದ್ರ ವಂದಿಸಿ, ಗೌರವ ಶಿಕ್ಷಕಿ ಅಕ್ಷತಾ ಕೆ ಕಾರ್ಯಕ್ರಮ ನಿರೂಪಿಸಿದರು. ಗೌರವ ಶಿಕ್ಷಕಿ ದೀಕ್ಷಾ ಸಹಕರಿಸಿದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಾ.30ರಂದು ಪದ್ಯಾಣಕ್ಕೆ ಏಕಾದಶ ತೀರ್ಥಗಳ ಭವ್ಯ ಮೆರವಣಿಗೆ:

| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…

3 hours ago

ಯಕ್ಷಗಾನದ ದಶಾವತಾರಿ ಸೂರಿಕುಮೇರು ಗೋವಿಂದ ಭಟ್ ಇನ್ನಿಲ್ಲ

ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…

2 days ago