ಬಂಟ್ವಾಳ: ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಂದ ಜನಸ್ಪಂದನ ಕಾರ್ಯಕ್ರಮವನ್ನು ಜೂನ್ 26ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದೆ. ಈ ಸಂದರ್ಭ ತಾಲೂಕಿನ ಎಲ್ಲ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿರುತ್ತಾರೆ. ಸಾರ್ವಜನಿಕರು ಅಹವಾಲುಗಳಿದ್ದಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸದುಪಯೋಗ ಪಡೆದುಕೊಳ್ಳಲು ತಾಲೂಕು ಆಡಳಿತ ಕೋರಿದೆ.