ಬಂಟ್ವಾಳ: ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಂದ ಜನಸ್ಪಂದನ ಕಾರ್ಯಕ್ರಮವನ್ನು ಜೂನ್ 26ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದ್ದು ರದ್ದುಗೊಂಡಿದೆ ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನಲ್ಲಿ ಮಳೆಯಿಂದಾಗಿ ನಡೆದ ಜೀವಹಾನಿ ಹಿನ್ನೆಲೆಯಲ್ಲಿ ಸಚಿವರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜನಸ್ಪಂದನ ಸಭೆಗೆ ಆಗಮಿಸಲು ಅಸಾಧ್ಯವಾಗಿರುವ ಕಾರಣ ಸಭೆಯನ್ನು ರದ್ದುಗೊಳಿಸಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.