ಗೋಡೆ ಕುಸಿದು ನಾಲ್ವರ ಸಾವು, ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ

ಉಳ್ಳಾಲ ತಾಲೂಕಿನ  ಮುನ್ನೂರು ಗ್ರಾಮದ ಮದನಿನಗರದಲ್ಲಿ ಮಂಗಳವಾರ ನಸುಕಿನ ಜಾವ ನಡೆದ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ದುರಂತ ಸಂಭವಿಸಿದೆ. 
ಕಂಪೌಂಡ್ ಗೋಡೆ ಮನೆಯ ಗೋಡೆ ಮೇಲೆ ಉರುಳಿ ಈ ಸಾವು ಸಂಭವಿಸಿದೆ. ಮನೆಯೊಳಗೆ ವಾಸ್ತವ್ಯವಿದ್ದ ರಿಹಾನ ಮಂಝಿಲ್ ಮನೆಯ ಯಾಸಿರ್(45), ಅವರ ಪತ್ನಿ ಮರಿಯಮ್ಮ(40) ಮಕ್ಕಳಾದ ರಿಹಾನ (11)ಮತ್ತು ರಿಫಾನ (17) ಮೃತಪಟ್ಟಿದ್ದಾರೆ.  
ರಾತ್ರಿ ಊಟ ಮುಗಿಸಿ ಮನೆಯ ಕೋಣೆಯಲ್ಲಿ ಮಲಗಿದ್ದ ಇಬ್ಬರು ಪುತ್ರಿಯರು ಹಾಗೂ ದಂಪತಿ ಬೆಳಗ್ಗಿನ ಹೊತ್ತಿಗೆ ಶವವಾಗಿದ್ದಾರೆ. ಧಾರಾಕಾರ  ಮಳೆ ಸುರಿದ ಪರಿಣಾಮ ಕಂಪೌಂಡ್ ಗೋಡೆ ಹಾಗೂ ಎರಡು ಅಡಕೆ ಮರ ಯಾಸಿರ್ ಅವರ ಮನೆ  ಮೇಲೆ ಉರುಳಿಬಿದ್ದಿದೆ.  ಮೂರು ಗಂಟೆಗಳ ಕಾರ್ಯಾಚರಣೆ ಬಳಿಕ ನಾಲ್ಕು ಮೃತದೇಹಗಳನ್ನು ಹೊರತೆಗೆಯಲಾಗಿದೆ.  ಸ್ಥಳೀಯರು ಮೂರು ಮೃತದೇಹಗಳನ್ನು ಅವಶೇಷಗಳಡಿಯಿಂದ ಹೊರತೆಗೆದರೆ , ಅಗ್ನಿಶಾಮಕ ದಳ ಸ್ಥಳೀಯರ ಜೊತೆ ಎರಡು ಗಂಟೆ ಕಾರ್ಯಾಚರಣೆ ನಡೆಸಿ ಕೊನೆಯ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳಕ್ಕೆ ಸ್ಪೀಕರ್ ಯು.ಟಿ.ಖಾದರ್ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಜೊತೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದರು.

ಜಾಹೀರಾತು
ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಗೋಡೆ ಕುಸಿದು ನಾಲ್ವರ ಸಾವು, ಸ್ಥಳಕ್ಕೆ ಸ್ಪೀಕರ್ ಖಾದರ್ ಭೇಟಿ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*