ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಹಾನಿಗಳು ಸಂಭವಿಸಿವೆ. ಈ ಹಿನ್ನೆಲೆಯಲ್ಲಿ ಗುರುವಾರ ರೆಡ್ ಎಲರ್ಟ್ ಘೋಷಿಸಲಾಗಿದ್ದು, ಶಾಲೆಗಳಿಗೆ ಜೂನ್ 27ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚನೆ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜೂನ್ 27ರಂದು ರಜೆಯನ್ನು ಘೋಷಿಸಲಾಗಿದೆ. ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಗಿದೆ.