ನಾಡಪ್ರಭು ಕೆಂಪೇಗೌಡರ ದೂರದೃಷ್ಟಿಯಿಂದ ಇಂದು ಬೆಂಗಳೂರು ಜಗತ್ತಿನ ಗಮನ ಸೆಳೆಯುತ್ತಿದೆ. ಅವರ ಕೆಲಸ ಕಾರ್ಯಗಳು ಮಾದರಿಯಾಗಿವೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಹೇಳಿದ್ದಾರೆ.
ನಾಡಪ್ರಭು ಕೆಂಪೇಗೌಡ ಜಯಂತಿಯ ಬಂಟ್ವಾಳ ತಾಲೂಕು ಮಟ್ಟದ ಆಚರಣೆ ಬಂಟ್ವಾಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಬಂಟ್ವಾಳ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮಕ್ಕೆ ಶಾಸಕ ರಾಜೇಶ್ ನಾಯ್ಕ್ ಚಾಲನೆ ನೀಡಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭ ಉಪನ್ಯಾಸ ನೀಡಿದ ಲಿಂಗಪ್ಪ ಗೌಡ ಮಾತನಾಡಿ, ಕೆಂಪೇಗೌಡರ ಬದುಕು, ಸಾಧನೆಗಳ ಕುರಿತು ಬೆಳಕು ಚೆಲ್ಲಿದರು.
ಈ ಸಂದರ್ಭ ಕೃಷಿ ಸಾಧಕರಾದ ಕೆ.ಚಂದ್ರಶೇಖರ್ ಅವರನ್ನು ಗೌರವಿಸಲಾಯಿತು. ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಅಧ್ಯಕ್ಷ ಮೋನಪ್ಪ ಗೌಡ, ಬಂಟ್ವಾಳ ತಹಸೀಲ್ದಾರ್ ಡಿ. ಅರ್ಚನಾ ಭಟ್, ತಾಪಂ ಆಡಳಿತಾಧಿಕಾರಿ ಡಿ.ಮಂಜುನಾಥ್, ತಾಪಂ ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಕುಮಾರ್ ಹೊಳ್ಳ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಉಪಸ್ಥಿತರಿದ್ದರು. ಉಪತಹಹಸೀಲ್ದಾರ್ ನವೀನ್ ಬೆಂಜನಪದವು ಕಾರ್ಯಕ್ರಮ ನಿರ್ವಹಿಸಿದರು. ಶ್ರೀಕಲಾ ಕಾರಂತ ಬಹುಮಾನಿತರ ಪಟ್ಟಿ ಹಾಗೂ ಸನ್ಮಾನಿತರ ವಿವರ ವಾಚಿಸಿದರು. ಉಪತಹಸೀಲ್ದಾರ್ ಗಳಾದ ರಾಜೇಶ್ ನಾಯ್ಕ್, ನರೇಂದ್ರನಾಥ ಮಿತ್ತೂರು, ನಾನಾ ಇಲಾಖೆಗಳ ಅಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.
Be the first to comment on "ಕೆಂಪೇಗೌಡರ ದೂರದೃಷ್ಟಿ ಮಾದರಿ: ಬಂಟ್ವಾಳದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್"