ಸರ್ವಧರ್ಮಿಯ ಮಕ್ಕಳು ಒಂದೇ ಕಡೆ ಸೇರಿ ಸಮಾನತೆಯನ್ನು ಮೆರೆಯಲು ಶಾಲೆಗಳೇ ಮುಖ್ಯ ಅವಕಾಶವನ್ನು ಕಲ್ಪಿಸುತ್ತದೆ ಎಂದು ಬಂಟ್ವಾಳ ತಾಲೂಕಿನ ಮಜಿ ವೀರಕಂಬ ಶಾಲೆಯ ದತ್ತು ಸಂಸ್ಥೆಯ ಮುಖ್ಯಸ್ಥ ಶ್ರೀಮಾತಾ ಡೆವಲಪರ್ಸ್ ಸುರತ್ಕಲ್ ನ ಮ್ಯಾನೇಜಿಂಗ್ ಡೈರೆಕ್ಟರ್ ಸಂತೋಷ್ ಕುಮಾರ್ ಶೆಟ್ಟಿ ಹೇಳಿದರು.
ಅವರು ಶಾಲೆಯಲ್ಲಿ ನಡೆದ 2024 25 ನೇ ಸಾಲಿನ ಶಿಕ್ಷಕ ರಕ್ಷಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಪೋಷಕರು ವಿದ್ಯಾರ್ಥಿಗಳ ದಿನನಿತ್ಯದ ಕಲಿಕೆ ವಿಮರ್ಶಿಸಿ ಮುತುವರ್ಜಿಯಿಂದ ಗಮನ ಹರಿಸಬೇಕು ಎಂದರು. ಸಂಪನ್ಮೂಲ ವ್ಯಕ್ತಿಯಾಗಿ ರೇಣುಕಾ ಕಣಿಯೂರು ಮಾರ್ಗದರ್ಶನ ನೀಢಿದರು.
ಶಾಲೆಯ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಆಯ್ಕೆಯಾದ ಈಶ್ವರ ಭಟ್ ರಾಕೋಡಿ ಮಾತನಾಡಿ, ಹಳೆ ವಿದ್ಯಾರ್ಥಿಗಳು ಶಾಲೆಯೊಂದಿಗೆ ಉತ್ತಮ ಬಾಂಧವ್ಯವನ್ನು ಇರಿಸಿಕೊಳ್ಳಬೇಕು ಎಂದರು.ಹಿರಿಯ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾದ ರಾಮ್ ಪ್ರಸಾದ್ ಕೊಂಬಿಲ ಶುಭ ಹಾರೈಸಿದರು.
ಎಸ್ ಡಿ ಎಂ ಸಿ ಅಧ್ಯಕ್ಷರಾದ ಕೊರಗಪ್ಪ ನಾಯ್ಕ ಇವರು ಅಧ್ಯಕ್ಷತೆ ವಹಿಸಿದ್ದರು. ವಿಟ್ಲ ಗ್ರಾಮೀಣ ಬ್ಯಾಂಕ್ ನೀಡಿದ ಮೈಕ್ ಅನ್ನು ಬ್ಯಾಂಕಿನ ನಿರ್ದೇಶಕರಾದ ವಿಶ್ವನಾಥ ಎಂ ಹಸ್ತಾಂತರಿಸಿದರು. ವೀರಕಂಬ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಜನಾರ್ಧನ ಪೂಜಾರಿ, ಎಸ್‌ಡಿಎಂಸಿ ಸದಸ್ಯರು, ಶಾಲಾ ಪೋಷಕರು ಉಪಸ್ಥಿತರಿದ್ದರು. ಶಿಕ್ಷಕಿ ಅನುಷಾ ಸ್ವಾಗತಿಸಿದರು.
ಮುಖ್ಯ ಶಿಕ್ಷಕಿ ಬೆನೆಡಿಕ್ಟಾ ಆಗ್ನೇಸ್ ಮಂಡೋನ್ಸಾ ಪ್ರಾಸ್ತಾವಿಕ ಮಾತುಗಳನ್ನಾನಡಿದರು. ಶಿಕ್ಷಕಿ ಮಮತಾ ದಾನಿಗಳ ಪಟ್ಟಿ ವಾಚಿಸಿ,ಶಿಕ್ಷಕಿ ಸಂಗೀತ ಶರ್ಮಾ ಕಾರ್ಯಕ್ರಮ ನಿರ್ವಹಿಸಿದರು.