ಜಿಲ್ಲಾ ಸುದ್ದಿ

ನಾಳೆ (ಜೂನ್ 28) ದಕ್ಷಿಣ ಕನ್ನಡದಲ್ಲಿ ಶಾಲೆ, ಪಿಯು ಕಾಲೇಜಿಗೂ ರಜೆ

ಕಳೆದ ಮೂರು ದಿನಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ಅಲ್ಲಲ್ಲಿ ಭೂಕುಸಿತ ಸಹಿತ ಸಮಸ್ಯೆಗಳು ತಲೆದೋರಿವೆ. ಈ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಜಿಲ್ಲಾಧಿಕಾರಿ ಗುರುವಾರ ದಕ್ಷಿಣ ಕನ್ನಡದ ಶಾಲೆಗಳಿಗೆ ರಜೆ ಘೋಷಿಸಿದ್ದರು. ಅದರಂತೆ ಇಂದು ಶಾಲೆಗಳು ಬಂದ್ ಆಗಿದ್ದವು. ಇದೀಗ ಮತ್ತೆ ಆದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಜೂನ್ 28ರಂದು ಅಂದರೆ ಶುಕ್ರವಾರವೂ ಶಾಲೆ, ಹೈಸ್ಕೂಲು, ಅಂಗನವಾಡಿ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿದ್ದು, ಇವುಗಳಲ್ಲದೆ, ಪದವಿಪೂರ್ವ ಕಾಲೇಜು (12ನೇ ತರಗತಿವರೆಗೆ) ತರಗತಿಗಳಿಗೂ ರಜೆ ಘೋಷಿಸಲಾಗಿದೆ.

ಜಾಹೀರಾತು

ಈ ಸಂದರ್ಭ ಸಂಭಾವ್ಯ ಪ್ರವಾಹ, ಭೂಕುಸಿತ ಪ್ರದೇಶಗಳನ್ನು ಗುರುತಿಸಿ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ತಹಸೀಲ್ದಾರ್ ಸಹಿತ ಪ್ರತಿಯೊಂದು ತಾಲೂಕುಗಳಲ್ಲೂ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ, ಸಮುದ್ರ ತೀರಕ್ಕೆ ಸಾರ್ವಜನಿಕರು, ಪ್ರವಾಸಿಗರು ತೆರಳದಂತೆ ಜಾಗ್ರತೆ ವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಬ್ರಹ್ಮಣ್ಯದಲ್ಲಿ ಕುಮಾರದಾರಾ ಸಹಿತ ಬೆಳ್ತಂಗಡಿ, ಬಂಟ್ವಾಳ ತಾಲೂಕಿನಲ್ಲಿ ನೇತ್ರಾವತಿ ನದಿಯ ಮಟ್ಟವೂ ಜಾಸ್ತಿಯಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದ್ದು, ನದಿಗಳ, ತೋಡುಗಳ, ಮತ್ತು ವಿದ್ಯುತ್ ಕಂಬ, ತಂತಿ ಬಳಿ ಹೋಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸಾವನ್ನಪ್ಪಿರುವ ಘಟನೆ ಅನುಲಕ್ಷಿಸಿ ಮತ್ತಷ್ಟು ಜಾಗ್ರತೆ ವಹಿಸುವಂತೆಸೂಚಿಸಲಾಗಿದೆ. ಅಪಾಯಕಾರಿ ಸನ್ನಿವೇಶಗಳಿಂದ ದೂರವಿರಿ ಎಂದು ಪದೇ ಪದೇ ಜಿಲ್ಲಾಧಿಕಾರಿ ಕಚೇರಿಯಿಂದ ಸೂಚನೆಗಳನ್ನು ನೀಡಲಾಗುತ್ತಿದೆ. ಟೋಲ್ ಫ್ರೀ ಸಂಖ್ಯೆ ದಿನದ 24 ತಾಲೂ ಇರಲಿದ್ದು ,1077 ಮತ್ತು 0824-2442590 ಸಂಖ್ಯೆಗೆ ಅಪಾಯವಾದಲ್ಲಿ ಕರೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

5 hours ago