ಬಂಟ್ವಾಳ ತಾಲೂಕಿನ ಪಾಣೆಮಂಗಳೂರು, ಕಲ್ಲಡ್ಕ, ಮಾಣಿ, ಪೆರ್ನೆ, ಪುತ್ತೂರು ಮತ್ತಿತರ ಕಡೆ ಶುಕ್ರವಾರ ತೆರಳಿ ಮಳೆಹಾನಿ ಬಗ್ಗೆ ವೀಕ್ಷಿಸಿದ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ಬಳಿಕ ಸಂಜೆ ವೇಳೆಗೆ ಮೊಡಂಕಾಪು ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದರು.
ಇಲ್ಲಿನ ಮಕ್ಕಳೊಂದಿಗೆ ಮಕ್ಕಳಾಗಿ ಬೆರೆತು ಎಲ್ಲರಿಗೂ ಕೈಕುಲುಕಿ ಮೆಚ್ಚುಗೆ ವ್ಯಕ್ತಪಡಿಸಿದರು. ಇದೇ ವೇಳೆ ಮಕ್ಕಳಿಂದ ಅಂಬೇಡ್ಕರ್ ಬಗ್ಗೆ ಹಾಡು ಹಾಡಿಸಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಗಮನ ಸೆಳೆದರು. ತಹಸೀಲ್ದಾರ್ ಅರ್ಚನಾ ಭಟ್, ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು ಜೊತೆಗಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೊಡಂಕಾಪು ಬಾಲಕರ ವಿದ್ಯಾರ್ಥಿನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿ"