ಕೇಂದ್ರ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಅವರ ನಿವಾಸಕ್ಕೆ ಭಾನುವಾರ ಸಂಜೆ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ ನೀಡಿ ಅವರ ಆಶೀರ್ವಾದ ಪಡೆದುಕೊಂಡರು.
ಈ ಸಂದರ್ಭ ಮಾತನಾಡಿದ ಅವರು ದಕ್ಷಿಣ ಕನ್ನಡದ ಅಭ್ಯುದಯದ ಕುರಿತು ತಾವು ಕೈಗೊಂಡ ಯೋಜನೆಗಳ ಸ್ಥೂಲನೋಟ ನೀಡಿ, ಅವುಗಳನ್ನು ಕಾರ್ಯರೂಪಕ್ಕೆ ತರಲು ಸಹಕಾರ ಕೋರಿದರು. ಈ ಸಂದರ್ಭ ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಆರ್. ಚೆನ್ನಪ್ಪ ಕೋಟ್ಯಾನ್, ಬಿಜೆಪಿ ಹಿರಿಯ ಮುಖಂಡ ಅರಳ ಗೋವಿಂದ ಪ್ರಭು, ಜಿಲ್ಲಾ ಉಪಾಧ್ಯಕ್ಷ ದಿನೇಶ್ ಅಮ್ಟೂರು, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಜಿಲ್ಲಾ ಮಾಧ್ಯಮ ಸಂಚಾಲಕ ವಸಂತ್ ಪೂಜಾರಿ ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಭೇಟಿ ಮಾಡಿದ ಸಂಸದ ಬ್ರಿಜೇಶ್ ಚೌಟ"