ಬಂಟ್ವಾಳ

ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ಮಹಾಸಭೆ

ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆಯನ್ನು ‘ಅನುಗ್ರಹ ಸಭಾಭವನ’ದಲ್ಲಿ ಹಮ್ಮಿಕೊಳ್ಳಲಾಯಿತು.
ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ  ಪದುವಾ ಕಾಲೇಜು , ನಂತೂರು  ಇಲ್ಲಿನ ವಿಶ್ವವಿದ್ಯಾನಿಲಯದ ಪ್ರಾಂಶುಪಾಲರಾದ ವಂದನೀಯ ಗುರು ಅರುಣ್ ವಿಲ್ಸನ್ ಲೋಬೋರವರು, ಸ್ಥಳೀಯ ಧರ್ಮ ಪ್ರಾಂತ್ಯದ ಸಹಾಯಕ ಗುರುಗಳಾದ ವಂದನೀಯ ಗುರು ಲ್ಯಾನ್ಸಿ ಡಿಸೋಜರವರು, ಶಿಕ್ಷಕ – ರಕ್ಷಕ ಸಂಘದ ಉಪಾಧ್ಯಕ್ಷರಾದ  ಸ್ಮಿತಾ ಡಿಸೋಜರವರು, ಶಾಲಾ ಮುಖ್ಯೋಪಾಧ್ಯಾಯರಾದ ವಂದನೀಯ  ಗುರು ಮೆಲ್ವಿನ್ ಲೋಬೋರವರು, ಸಹ ಮುಖ್ಯೋಪಾಧ್ಯಾಯಿನಿ  ಗ್ಲ್ಯಾಡಿಸ್ ರವರು ಸಭೆಯ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾರ್ಥನೆಯೊಂದಿಗೆ ಸಭೆಯನ್ನು ಆರಂಭಿಸಿ, ದೀಪ ಬೆಳಗಿಸುವುದರೊಂದಿಗೆ ಸಭೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು . ಶಿಕ್ಷಕಿ  ಗ್ಲ್ಯಾಡಿಸ್ ಡಿಸೋಜರವರು  ಸ್ವಾಗತಿಸಿದರು. ಶಿಕ್ಷಕಿ ಲಿನೆಟ್ ರವರು ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿರುವ ವಂದನೀಯ ಗುರು ಅರುಣ್ ವಿಲ್ಸನ್ ಲೋಬೊರವರ ಕಿರು ಪರಿಚಯವನ್ನು ಮಾಡಿಕೊಟ್ಟರು.
ತಮ್ಮ ಭಾಷಣದಲ್ಲಿ ವಿದ್ಯಾರ್ಥಿಗಳು ಗೋಣಿಯಲ್ಲಿ ತುಂಬಿಸುವ ಭತ್ತವಾಗಬಾರದು. ಲವಲವಿಕೆಯೊಂದಿಗೆ ಗದ್ದೆಯಲ್ಲಿ ಬೆಳೆಯುತ್ತಿರುವ ಭತ್ತದಂತಿರಬೇಕು. ಹೆತ್ತವರಾಗಿ ಮಕ್ಕಳಿಗೆ ಬೇಕಾದುದೆಲ್ಲವನ್ನು ಕೊಡುತ್ತೇವೆ. ಆದರೆ ಮಕ್ಕಳಿಗೆ ಅತ್ಯಗತ್ಯವಾಗಿ ಬೇಕಾಗಿರುವ ತಮ್ಮ ಒಂದಿಷ್ಟು ಸಮಯವನ್ನು ಅವರಿಗಾಗಿ ಮೀಸಲಿಡಬೇಕು. ಇದರಿಂದ ನಮ್ಮ ಮಕ್ಕಳು ಕುಟುಂಬ ಹಾಗೂ ಸಮಾಜಕ್ಕೆ ಅಲಂಕಾರವಾಗಬಲ್ಲರು. ಈ ನಿಟ್ಟಿನಲ್ಲಿ ಹೆತ್ತವರು ಹಾಗೂ ಶಿಕ್ಷಕರ ಜವಾಬ್ದಾರಿಯನ್ನು ಮನವರಿಕೆ ಮಾಡಿಕೊಟ್ಟರು.
ಶಿಕ್ಷಕಿ  ಜಾನಿಸ್ ರವರು  ಗತ ವರ್ಷದ ವರದಿಯನ್ನು ವಾಚಿಸಿದರು. ಶಿಕ್ಷಕಿ  ವಿಲ್ಮಾ ರವರು ಆಯವ್ಯಯ ಪಟ್ಟಿಯನ್ನು ಮಂಡಿಸಿದರು. ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷರಾದ  ಸ್ಮಿತಾರವರು ಸಭೆಯನ್ನು  ಉದ್ದೇಶಿಸಿ ಮಾತನಾಡಿ , ಸಹಕಾರವಿತ್ತ ಸರ್ವರನ್ನು ವಂದಿಸಿ  ಅಭಿನಂದಿಸಿದರು.
ಶಾಲಾ ಮುಖ್ಯೋಪಾಧ್ಯಾಯರು ಶಾಲಾ ನಿಯಮಾವಳಿಗಳು ಹಾಗೂ ಶಾಲಾ ಶ್ರೇಯೋಭಿವೃದ್ಧಿಗೆ  ಸಹಕಾರಿಯಾಗಬಲ್ಲ ಹಲವಾರು ಅಂಶಗಳನ್ನು ಸಭೆಯ ಮುಂದಿಟ್ಟರು. ಶಿಕ್ಷಕಿ ಶ್ರೀಮತಿ ಸುನಿತಾರವರು ಕಾರ್ಯಕಾರಿ ಸಮಿತಿಯ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆಯನ್ನು ನಡೆಸಿಕೊಟ್ಟರು. ಮುಖ್ಯೋಪಾಧ್ಯಾಯರು ಹೆತ್ತವರು ಬರೆದು ಕಳಿಸಿರುವ ಸಲಹೆ ಸೂಚನೆಗಳನ್ನು ಸಭೆಯ ಮುಂದಿಟ್ಟು  , ಅವುಗಳನ್ನು ಸಮಿತಿಯಲ್ಲಿ ಚರ್ಚಿಸಿ , ಅಗತ್ಯವಿದ್ದಲ್ಲಿ ನೆರವೇರಿಸುವುದಾಗಿ  ತಿಳಿಸಿದರು. ಶಿಕ್ಷಕಿ ಪ್ರೆಸಿಲ್ಲಾರವರು ವಂದಿಸಿದರು. ಶಿಕ್ಷಕಿ  ಉಷಾ ಕಾರ್ಯಕ್ರಮವನ್ನು
ನಿರೂಪಿಸಿದರು. ರಾಷ್ಟ್ರಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

1 hour ago