ಬಂಟ್ವಾಳ

ಮಾಜಿ ಸಚಿವ ರೈ ನಿವಾಸಕ್ಕೆ ಸಚಿವ ಖಂಡ್ರೆ ಭೇಟಿ, ಪ್ರಚಲಿತ ವಿದ್ಯಮಾನ ಕುರಿತು ಚರ್ಚೆ

ಮಾಜಿ ಸಚಿವ ಬಿ.ರಮಾನಾಥ ರೈ ಅವರ ಕಳ್ಳಿಗೆಯಲ್ಲಿರುವ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಪ್ರಮುಖ ನಾಯಕರೂ ಆಗಿರುವ ರೈ ಜೊತೆ ಪ್ರಸ್ತುತ ರಾಜಕೀಯ, ಸಾಮಾಜಿಕ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿದ್ದು, ಈ ಹಿಂದೆ ಅರಣ್ಯ ಸಚಿವರಾಗಿದ್ದ ರಮಾನಾಥ ರೈ ಜೊತೆ ಇಲಾಖಾ ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡದ್ದಲ್ಲದೆ,  ಪ್ರಚಲಿತ ವಿಚಾರಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭ ಬಂಟ್ವಾಳದ ಸ್ಥಳೀಯ ಕಾಂಗ್ರೆಸ್ ಮುಖಂಡರು ಜತೆಗಿದ್ದರು.

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ