ಮಾಜಿ ಸಚಿವ ಬಿ.ರಮಾನಾಥ ರೈ ಅವರ ಕಳ್ಳಿಗೆಯಲ್ಲಿರುವ ನಿವಾಸಕ್ಕೆ ಮಂಗಳವಾರ ಬೆಳಗ್ಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಭೇಟಿ ನೀಡಿದ್ದಾರೆ. ಈ ಸಂದರ್ಭ ಕಾಂಗ್ರೆಸ್ ಪ್ರಮುಖ ನಾಯಕರೂ ಆಗಿರುವ ರೈ ಜೊತೆ ಪ್ರಸ್ತುತ ರಾಜಕೀಯ, ಸಾಮಾಜಿಕ ವಿದ್ಯಮಾನಗಳ ಕುರಿತು ಮಾತುಕತೆ ನಡೆಸಿದರು. ಈಶ್ವರ ಖಂಡ್ರೆ ಅವರು ಅರಣ್ಯ ಸಚಿವರಾಗಿದ್ದು, ಈ ಹಿಂದೆ ಅರಣ್ಯ ಸಚಿವರಾಗಿದ್ದ ರಮಾನಾಥ ರೈ ಜೊತೆ ಇಲಾಖಾ ವಿಚಾರಗಳ ಕುರಿತು ಮಾಹಿತಿ ಪಡೆದುಕೊಂಡದ್ದಲ್ಲದೆ, ಪ್ರಚಲಿತ ವಿಚಾರಗಳ ಕುರಿತು ಮಾತುಕತೆ ನಡೆಸಿದರು. ಈ ಸಂದರ್ಭ ಬಂಟ್ವಾಳದ ಸ್ಥಳೀಯ ಕಾಂಗ್ರೆಸ್ ಮುಖಂಡರು ಜತೆಗಿದ್ದರು.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)