ವಿಟ್ಲ

ಮಾಣಿಲದ ಮಾತೃಭೂಮಿ ಯುವ ವೇದಿಕೆಯಿಂದ ಮೂರನೇ ವರ್ಷದ ಪುಸ್ತಕ ಉಚಿತ ವಿತರಣೆ

ಮಾಣಿಲದ ಮಾತೃಭೂಮಿ ಯುವ ವೇದಿಕೆ ವತಿಯಿಂದ 3ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸನ್ಮಾನ ಸಮಾರಂಭ ಕಾರ್ಯಕ್ರಮ ನಡೆಯಿತು. ಮಾಣಿಲ ಗ್ರಾಮದ ಸುಮಾರು 160 ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಮತ್ತು ಹತ್ತನೇ ತರಗತಿಯಲ್ಲಿ ಸಾಧನೆಗೈದ ಮಕ್ಕಳಿಗೆ ಸನ್ಮಾನ ಕಾರ್ಯಕ್ರಮ  ಗಣ್ಯರ ಸಮ್ಮುಖ ನಡೆಯಿತು.

ಜಾಹೀರಾತು

ಮುರುವದ ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಾತೃಭೂಮಿ ಯುವ ವೇದಿಕೆ (ರಿ.) ಮಾಣಿಲ ಆಯೋಜಿಸಿರುವ ಉಚಿತ ಪುಸ್ತಕ ವಿತರಣಾ ಮತ್ತು ಸನ್ಮಾನ ಸಮಾರಂಭವನ್ನು ವೇದಿಕೆಯ ಮಾರ್ಗದರ್ಶಕ ಮುಖಂಡ ಅರುಣ್ ಕುಮಾರ್ ಪುತ್ತಿಲ ಉದ್ಘಾಟಿಸಿದರು. ಸ್ವಾಮಿ ವಿವೇಕಾನಂದರ ತತ್ವಾದರ್ಶದೊಂದಿಗೆ ಸಂಘದ ಪ್ರೇರಣೆಯ ಜೊತೆಗೆ ಸಮಾನ ಮನಸ್ಕ ಯುವಕರ ತಂಡ ಮಾಡುತ್ತಿರುವ ಕೆಲಸ ಮಾದರಿ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಾತನಾಡಿದ ನಮ್ಮ ಕುಡ್ಲ ವಾಹಿನಿಯ ನಿರೂಪಕಿ ಡಾ ಪ್ರಿಯಾ ಹರೀಶ್ ಮಾತನಾಡಿ, ಮಕ್ಕಳು ಜೀವನದಲ್ಲಿ ಪರಿಶ್ರಮದ ಮುಖಾಂತರ ಗೆಲ್ಲಬೇಕು ಎಂದರು.

ಜಾಹೀರಾತು

ಇನ್ನೋರ್ವ ಅತಿಥಿ ಮುರುವ ನಡುಮನೆ ಮಹಾಬಲ ಭಟ್ ಶುಭ ಹಾರೈಸಿದರು. ಮಾತೃಭೂಮಿ ಯುವ ವೇದಿಕೆಯ ಅಧ್ಯಕ್ಷರಾದ ರಂಜಿತ್ ಕುಮಾರ್ ಮುಜೂರು ಮಾತನಾಡಿ, ಮಕ್ಕಳು ಸಂಸ್ಕಾರಯುತ ಗುಣಗಳನ್ನು ಬೆಳೆಸಿಕೊಂಡು ಸತ್ಪ್ರಜೆಗಳಾಗಿ ಬೆಳೆಸುವಲ್ಲಿ ಪೋಷಕರ ಪಾತ್ರ ಮಹತ್ತರವಾದುದು ಎಂದರು.

ಈ ಸಂದರ್ಭ ಮಾಣಿಲ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿ, ಮುಖ್ಯಶಿಕ್ಷಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ ಬಾಲಕೃಷ್ಣ ಮಾಸ್ಟರ್ ಆತ್ಮಕ್ಕೆ ಚಿರಶಾಂತಿ ಕೋರಿ ಮೌನ ಪ್ರಾರ್ಥನೆ ನಡೆಸಲಾಯಿತು. ಈ ಸಂದರ್ಭ ಎಸ್ ಎಸ್ ಎಲ್ ಸಿ ಯಲ್ಲಿ ಮಹತ್ತರ ಸಾಧನೆಗೈದ ಸರಕಾರಿ ಪ್ರೌಢಶಾಲೆ ಮಾಣಿಲದ ವಿದ್ಯಾರ್ಥಿಗಳಾದ  ದೀಕ್ಷಿತ, ಕೀರ್ತನ ಎಸ್ ಕುಲಾಲ್ ಹಾಗೂ ಮನೀಶ್ ಕುಮಾರ್ ಅವರನ್ನು ‌ಸನ್ಮಾನಿಸಲಾಯಿತು. ಸಮೀಕ್ಷಾ ವೈಯಕ್ತಿಕ ಗೀತೆಯನ್ನು ಹಾಡಿದರು. ರವಿ ಮಾಣಿಲ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾತೃಭೂಮಿ ಯುವ ವೇದಿಕೆಯ ಸಂಘಟನಾ ಕಾರ್ಯದರ್ಶಿ ಪ್ರದೀಪ್ ಕುಮಾರ್ ಕೊಂಕೋಡು ಸ್ವಾಗತಿಸಿದರು. ಸಂಚಾಲಕರಾದ ಸುದೇಶ್ ಮಾಣಿಲ ವಂದಿಸಿದರು. ತೀರ್ಥನಾ, ಸ್ಮಿತಾ, ಲಾವಣ್ಯ ಪ್ರಾರ್ಥಿಸಿದರು. ಉಪನ್ಯಾಸಕರಾದ ಜಯಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ