ಬಂಟ್ವಾಳ: ಮಲೇರಿಯಾ ಮತ್ತು ಡೆಂಗ್ಯೂ ಸೊಳ್ಳೆಗಳಿಂದ ಹರಡುವ ಕಾಯಿಲೆಗಳಾಗಿದ್ದು ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಡುವ ಮೂಲಕ ಈ ಕಾಯಿಲೆಗಳು ಹರಡದಂತೆ ತಡೆಯಬಹುದು ಎಂದು ಜಿಲ್ಲಾ ಆರೋಗ್ಯ ನಿರೀಕ್ಷಕ ಪ್ರದೀಪ್ ಕುಮಾರ್ ಹೇಳಿದರು. ಬಿ.ಮೂಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಬಂಟ್ವಾಳ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ನಡೆದ ಮಲೇರಿಯಾ ಮಾಸಾಚರಣೆ ಮತ್ತು ಡೆಂಗ್ಯೂ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡೆಂಗ್ಯೂ ನಿಯಂತ್ರಣ ಮೀರಿದರೆ ಮಾರಣಾಂತಿಕವೂ ಹೌದು ಆದುದರಿಂದ ವಿದ್ಯಾರ್ಥಿಗಳು ಸ್ವ ಅರಿವು ಮತ್ತು ಪರಿಸರದಲ್ಲಿ ಇತರರಿಗೆ ಮಾಹಿತಿ ನೀಡುವ ಮೂಲಕ ಈ ಕಾಯಿಲೆಯ ಬಗ್ಗೆ ಜನಜಾಗೃತಿ ಮಾಡಬಹುದು ಎಂದು ಸಂಪನ್ಮೂಲ ವ್ಯಕ್ತಿಗಳು ಹೇಳಿದರು.
ತಾಲೂಕೂ ಆರೋಗ್ಯಾಧಿಕಾರಿ ಡಾ. ಅಶೋಕ್ ಕುಮಾರ್ ರೈ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಮತ್ತು ವಿಜ್ಞಾನ ಸಂಘ ಕಾರ್ಯಕ್ರಮಕ್ಕೆ ಸಹಯೋಗ ನೀಡಿತ್ತು. ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕರಾದ ದಾಮೋದರ್, ಲವೀನಾ ಶಾಂತಿ ಲೋಬೋ, ಲಕ್ಷ್ಮೀ ಆಚಾರ್ಯ , ಆರೋಗ್ಯ ಇಲಾಖೆಯ ಸಿಬ್ಬಂದಿ ಕುಸುಮ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಯೋಜನಾಧಿಕಾರಿ ಬಾಲಕೃಷ್ಣ ನಾಯ್ಕ್ ಕೆ ಸ್ವಾಗತಿಸಿದರು. ಉಪನ್ಯಾಸಕ ಅಬ್ದುಲ್ ರಝಾಕ್ ಕಾರ್ಯಕ್ರಮ ನಿರೂಪಿಸಿದರು. ಸಿಬ್ಬಂದಿ ಕುಸುಮ ವಂದಿಸಿದರು